Latest

ಮತ್ತೆ ಅನಾರೋಗ್ಯ ಹಿನ್ನಲೆ; ಆಸ್ಪತ್ರೆಗೆ ದಾಖಲಾದ ಕೇಂದ್ರ ಗೃಹ ಸಚಿವ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತೆ ಅನಾರೋಗ್ಯಕ್ಕೀಡಾಗಿದ್ದು, ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಇತ್ತೀಚೆಗೆ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದ ಅಮಿತ್ ಶಾ ಅವರಿಗೆ ತಡ ರಾತ್ರಿ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದೆ. ಈ ಹಿನ್ನಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಇತ್ತೀಚೆ ಅಮಿತ್ ಶಾ ಪದೇ ಪದೇ ಅನಾರೋಗ್ಯಕ್ಕೀಡಾಗುತ್ತಿದ್ದು, ಶಾ ಅವರಿಗೆ ಆಗಸ್ಟ್​ 2ರಂದು ಕೊರೋನಾ ಪಾಸಿಟಿವ್​ ಬಂದಿತ್ತು. ಈ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಬಳಿಕ ಆಗಸ್ಟ್​ 14ರಂದು ಕೊರೊನಾ ನೆಗೆಟಿವ್​ ಬಂದಿತ್ತು. ಆಗಸ್ಟ್​ 31ರಂದು ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿ ಮನೆಯಲ್ಲೇ ಚಿಕಿತ್ಸೆ ಮತ್ತು ವಿಶ್ರಾಂತಿ ಪಡೆಯುತ್ತಿದ್ದರು. ಆದರೀಗ ಅವರಲ್ಲಿ ಉಸಿರಾಟದ ತೊಂದರೆ ಕಾಣಿಸಿಕೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button