Latest

ರೈತ ಮುಖಂಡರ ಜತೆ ಅಮಿತ್ ಶಾ ಸಭೆ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆ ವಿರೋಧಿಸಿ ದೆಹಲಿ-ಹರಿಯಾಣ ಗಡಿಯ ಸಿಂಘು ಬಾರ್ಡರ್ ನಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ 13ನೇ ದಿನಕ್ಕೆ ಕಾಲಿಟ್ಟಿದೆ. ಇಂದು ಸಂಜೆ 7 ಗಂಟೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರತಿಭಟನಾ ನಿರತ ರೈತರ ಜೊತೆ ಮಾತುಕತೆ ನಡೆಸಲಿದ್ದಾರೆ.

ಸಿಂಘು ಬಾರ್ಡರ್ ನಲ್ಲಿ ಹರಿಯಾಣಾ, ಪಂಜಾಬ್, ರಾಜಸ್ಥಾನ ಸೇರಿದಂತೆ ವಿವಿಧ ರಾಜ್ಯಗಲ ರೈತರು ಕಳೆದ 13 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಈಗಾಗಲೇ ರೈತ ಮುಖಂಡರೊಂದಿಗೆ ನಡೆಸಿದ ಹಲವು ಸಂಧಾನ ಸಭೆಗಳು ವಿಫಲವಾಗಿವೆ. ಈ ನಡುವೆ ಇಂದು ರೈತರು ಕರೆ ನೀಡಿದ್ದ ಭಾರತ್ ಬಂದ್ ನಿಂದಾಗಿ ವಿವಿಧೆಡೆಗಳಲ್ಲಿ ರೈಲು, ರಸ್ತೆ ಸಂಚಾರ ಅಸ್ತವ್ಯಸ್ಥಗೊಂಡಿದೆ.

ರೈತರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ ಗೃಹ ಸಚಿವ ಅಮಿತ್ ಶಾ ರೈತ ಮುಖಂಡರ ಜೊತೆ ಮತ್ತೊಮ್ಮೆ ಚರ್ಚೆ ನಡೆಸಲು ಮುಂದಾಗಿದ್ದು, ಸಂಜೆ 7 ಗಂಟೆಗೆ ಮಾತುಕತೆಗೆ ಬರುವಂತೆ ಆಹ್ವಾನಿಸಿದ್ದಾರೆ ಎಂದು ರೈತ ಮುಖಂಡ ರಾಕೇಶ್ ಟಿಕಾಯತ್ ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button