
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ರಾಜ್ಯ ಗೃಹ ಸಚಿವ ಅರಗ ಜ್ಞಾನೇಂದ್ರ ಬುಧವಾರ ಬೆಳಗಾವಿಗೆ ಆಗಮಿಸಲಿದ್ದಾರೆ.
ಸಚಿವರಾದ ನಂತರ ಇದು ಬೆಳಗಾವಿಗೆ ಅವರ ಮೊದಲ ಭೇಟಿಯಾಗಿದೆ.
ಕಂಗ್ರಾಳಿಯ ಕೆಎಸ್ ಆರ್ ಪಿ ತರಬೇತಿ ಶಾಲೆಯಲ್ಲಿ ಬುಧವಾರ ಬೆಳಗ್ಗೆ 8.30ಕ್ಕೆ ನಡೆಯಲಿರುವ ಸಶಸ್ತ್ರ ಮೀಸಲು ಪೊಲೀಸ್ ಕಾನ್ ಸ್ಟೆಬಲ್ ಪ್ರಶಿಕ್ಷಣಾರ್ಥಿಗಳ ನಿರ್ಗಮ ಪಥ ಸಂಚಲನ ಕಾರ್ಯಕ್ರಮಕ್ಕೆ ಅರಗ ಜ್ಞಾನೇಂದ್ರ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.
ಕರ್ನಾಟಕ ಮೀಸಲು ಪೊಲೀಸ್ ಪಡೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ ಸಹ ಕಾರ್ಯಕ್ರಮದಲ್ಲಿ ಭಾಗವಹಿಸವರು.
ಭ್ರಷ್ಟಾಚಾರ ಆರೋಪ; ಕೃಷಿ ಸಚಿವ ಬಿ.ಸಿ.ಪಾಟೀಲ್ ವಿರುದ್ಧ ಎಸಿಬಿಗೆ ದೂರು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ