
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪಿಎಸ್ ಐ ಹುದ್ದೆ ನೇಮಕಾತಿ ಅಕ್ರಮ ಪ್ರಕರಣ ಸಂಬಂಧ ನೇಮಕಾತಿ ವಿಭಾಗದ ಡಿವೈ ಎಸ್ ಪಿ ಶಾಂತಕುಮಾರ್ ಅವರನ್ನು ಬಂಧಿಸಿಲ್ಲ. ವಿಚಾರಣೆ ನಡೆಸಲಾಗಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಸ್ಪಷ್ಟ ಪಡಿಸಿದ್ದಾರೆ.
ಪಿಎಸ್ ಐ ಅಕ್ರಮ ಪ್ರಕರಣದಲ್ಲಿ ಡಿವೈ ಎಸ್ ಪಿ ಶಾಂತಕುಮಾರ್ ಭಾಗಿಯಾಗಿರುವ ಬಗ್ಗೆ ಆರೋಪ ಕೇಳಿಬಂದಿತ್ತು. ವಿಚಾರಣೆಗೆ ವಶಕ್ಕೆ ಪಡೆದ ಸಿಐಡಿ ಅಧಿಕಾರಿಗಳು ಶಾಂತಕುಮಾರ್ ಅವರನ್ನು ಬಂಧಿಸಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಡಿವೈ ಎಸ್ ಪಿ ಶಾಂತಕುಮಾರ್ ಬಂಧನವಾಗಿಲ್ಲ ಎಂದು ಗೃಹ ಸಚಿವರು ತಿಳಿಸಿದ್ದಾರೆ.
ಶಾಂತಕುಮಾರ್ ವಿರುದ್ಧ ಸೂಕ್ತ ಸಾಕ್ಷ್ಯಗಳು ಸಿಕ್ಕಿಲ್ಲ. ಸಿಕ್ಕರೆ ಅವರನ್ನು ಅರೆಸ್ಟ್ ಮಾಡುತ್ತಾರೆ. ಈ ಹಿಂದೆ ಅರೆಸ್ಟ್ ಆಗಿದ್ದ ಸಿಬ್ಬಂದಿಗಳ ವಿಚಾರಣೆಯಲ್ಲಿ ಕೆಲವೊಂದು ಮಾಹಿತಿ ಸಿಕ್ಕಿವೆ. ಹಾಗಾಗಿ ಡಿವೈ ಎಸ್ ಪಿ ಶಾಂತಕುಮಾರ್ ವಿಚಾರಣೆ ನಡೆಸಲಾಗಿತ್ತು. ಪರೀಕ್ಷೆಯ ಪ್ರತಿ ಕೇಂದ್ರದಲ್ಲೂ ಪೊಲೀಸರು ಕೆಲಸ ಮಾಡಿದ್ದರು. ಹಾಗಾಗಿ ಯಾರು ಯಾರು ಕೆಲಸ ಮಾಡಿದ್ದರು ಅವರನ್ನೆಲ್ಲಾ ವಿಚಾರಣೆ ನಡೆಸಲಾಗುತ್ತಿದೆ ಎಂದರು.
1996ನೇ ಬ್ಯಾಚ್ ನ ಸಶಸ್ತ್ರ ಮೀಸಲು ಪಡೆಯ ಕಾನ್ ಸ್ಟೇಬಲ್ ಆಗಿ ಪೊಲೀಸ್ ಸೇವೆ ಪದಾರ್ಪಣೆ ಮಾಡಿದ್ದ ಶಾಂತಕುಮಾರ್ 2006ರಲ್ಲಿ ಆರ್ ಎಸ್ ಐ ಪರೀಕ್ಷೆ ಬರೆದು ಉತ್ತೀರ್ಣರಾಗಿ ಒಂದು ವರ್ಷ ಕಲಬುರ್ಗಿಯಲ್ಲಿ ಕಾರ್ಯನಿರ್ವಹಿಸಿದ್ದಾರೆ. ಎರಡು ವರ್ಷಗಳ ಹಿಂದೆ ಡಿವೈ ಎಸ್ ಪಿಯಾಗಿ ಬಡ್ತಿ ಪಡೆದು ಪಿಎಸ್ ಐ ನೇಮಕಾತಿ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದರು.
ಮುಖ್ಯಕಾರ್ಯದರ್ಶಿ ಹುದ್ದೆಗೆ 9 ಐಎಎಸ್ ಅಧಿಕಾರಿಗಳು ರೇಸ್ ನಲ್ಲಿ