Latest

*ನಮ್ಮ ಪೊಲೀಸರನ್ನು ದುರ್ಬಲಗೊಳಿಸುವ ಯತ್ನವಿದು; ಗೃಹ ಸಚಿವ ಅರಗ ಜ್ಞಾನೇಂದ್ರ ಆಕ್ರೋಶ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕುಕ್ಕರ್ ಬಾಂಬ್ ಸ್ಫೊಟದ ಕುರಿತ ಡಿ.ಕೆ.ಶಿವಕುಮಾರ್ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿರುವ ಗೃಹ ಸಚಿವ ಅರಗ ಜ್ಞಾನೇಂದ್ರ, ಕೆಪಿಸಿಸಿ ಅಧ್ಯಕ್ಷ ಈ ಹೇಳಿಕೆಗಳು ತುಂಬಾ ನೋವು ತಂದಿದೆ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಅರಗ ಜ್ಞಾನೇಂದ್ರ, ಇದು ಜವಾಬ್ದಾರಿಯುತವಾದ ಸ್ಥಾನದಲ್ಲಿರುವವರು ಆಡುವ ಮಾತಲ್ಲ. ದೇಶದ ಆಂತರಿಕ ಭದ್ರತೆ ವಿಚಾರವಿದು. ಡಿ.ಕೆ.ಶಿವಕುಮಾರ್ ಅವರು ರಾಜಕೀಯವನ್ನು ಬಿಟ್ಟು ಯೋಚನೆ ಮಾಡಬೇಕು ಎಂದು ಹೇಳಿದರು.

ಡಿ.ಕೆ.ಶಿಯವರು ಈ ಹಿಂದೆ ಸರ್ಕಾರದಲ್ಲಿ ಮಂತ್ರಿಯಾಗಿದ್ದವರು. ತನಿಖೆ ನಡೆಸದೆಯೇ ಉಗ್ರ ಎಂದು ಹೇಗೆ ಘೋಷಿಸಿದಿರಿ ಎಂದು ಪ್ರಶ್ನಿಸಲು ತನಿಖೆ ನಡೆಸಿಯೇ ನಿರ್ಧಾರ ಕೈಗೊಂಡಿದ್ದು, ಆರೋಪಿ ಶಾರಿಕ್ ಬಗ್ಗೆ ಪೊಲೀಸರಿಗೆ ಗೊತ್ತಿತ್ತು. ಆತನನ್ನು ಪೊಲೀಸರು ಹುಡುಕುತ್ತಿದ್ದರು. ಡಿ.ಕೆ.ಶಿವಕುಮಾರ್ ಹೇಳಿಕೆ ನಮ್ಮ ಪೊಲೀಸರನ್ನು ದುರ್ಬಲಗೊಳಿಸುವ ಯತ್ನ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

ಕುಕ್ಕರ್ ಸ್ಫೋಟದ ಭಯೋತ್ಪಾದಕ ಪ್ರಕರಣವನ್ನು “ಭಯೋತ್ಪಾದಕ ಕೃತ್ಯ” ಎಂದು ಡಿಜಿಪಿಯವರು ತನಿಖೆಯ ಆಧಾರದಲ್ಲಿ ಘೋಷಿಸಿದರೆ ಕೆಂಡಾಮಂಡಲವಾಗಿದ್ದಾರೆ. ಉಗ್ರನನ್ನು ಉಗ್ರ ಎನ್ನದೇ ಡಿಕೆಶಿಯವರ ಹಾಗೆ “ನಮ್ಮ ಬ್ರದರ್ಸ್” ಎನ್ನಬೇಕಿತ್ತೇನು? ದೇಶದ ಭದ್ರತೆಯ ವಿಚಾರದಲ್ಲಿ ಕಾಂಗ್ರೆಸ್ ಉಗ್ರರ ಪರ ನಿಲ್ಲುತ್ತಿದೆ. ಸ್ಫೋಟದ ಬಳಿಕ ಎನ್ ಐ ಎ ಪ್ರಕರಣವನ್ನು ತೀವ್ರಗತಿಯಲ್ಲಿ ಪರಿಗಣಿಸಿ ಡಿಕೆಶಿ ‘ಬ್ರದರ್’‌ನನ್ನು ಬಂಧಿಸಿದ ನಂತರ ಉಗ್ರಗಾಮಿ ಸಂಘಟನೆಗಳು ನೇರವಾಗಿ ಬೆಂಬಲ ಘೋಷಿಸಿದ್ದೂ ಅಲ್ಲದೇ ‘ನಮ್ಮ ಹುಡುಗ ಯಶಸ್ವಿಯಾಗಿದ್ದಾನೆ’ ಎಂದು ಹೇಳಿಕೆ‌ ನೀಡಿತ್ತು. ಹಾಗಾದರದೂ ಉಗ್ರವಾದವಲ್ಲವೇ? ಎಂದು ಬಿಜೆಪಿ ಕಿಡಿಕಾರಿದೆ.

ಕಾಂಗ್ರೆಸ್ ಇಷ್ಟು ವರ್ಷ ಕೇಂದ್ರದಲ್ಲಿ ಅಧಿಕಾರದಲ್ಲಿದ್ದಾಗ ಮಾಡಿದ್ದೆಲ್ಲವೂ ಇಂಥದ್ದೇ. ನಿಜವಾದ ಉಗ್ರರನ್ನು ಬಚ್ಚಿಟ್ಟು, ಹಿಂದೂಗಳ ಮೇಲೆಯೇ ಉಗ್ರರು ಎಂದು ಸುಳ್ಳು ಕೇಸ್ ಹಾಕುತ್ತಾ ಕುಳಿತಿದ್ದಕ್ಕೇ ಅಲ್ಲವೇ ಮುಂಬೈ ತಾಜ್ ಮೇಲೆ‌ ಉಗ್ರರ ದಾಳಿಯಾಗಿದ್ದು? ಕಾಶ್ಮೀರ ಕಣಿವೆಯಲ್ಲಿ ಉಗ್ರರ ಅಟ್ಟಹಾಸವಿದ್ದಿದ್ದು? ಮಂಗಳೂರು ಕುಕ್ಕರ್ ಸ್ಪೋಟವನ್ನು ಸಮರ್ಥಿಸಿಕೊಳ್ಳುವ ಮೂಲಕ ಕಾಂಗ್ರೆಸ್ ಅಧ್ಯಕ್ಷರು ತಮ್ಮದು ಭಯೋತ್ಪಾದನಾ ಸಮರ್ಥಕರ ಪಕ್ಷ ಎಂದು ಘೋಷಿಸಿಕೊಂಡಿದೆ. ಚುನಾವಣೆ ಸಮೀಪಿಸಿದಾಗ ಭಾವನಾತ್ಮಕ ಸಂಗತಿಗಳ ಹರಡುವಿಕೆ ಎನ್ನುವ ಡಿಕೆಶಿಯವರು, ದೇಶದ ಭದ್ರತೆಗೆ ಕಂಟಕ ತರುವ ಹೇಳಿಕೆ ನೀಡಿದ್ದಾರೆ.

ಸರ್ಜಿಕಲ್ ಸ್ಟ್ರೈಕನ್ನು ಅಲ್ಲಗೆಳೆದರು, ಏರ್ ಸ್ಟ್ರೈಕನ್ನು ಅಲ್ಲಗೆಳೆದರು, ಪುಲ್ವಾಮಾ ದಾಳಿಯನ್ನು ಪಾಕಿಸ್ಥಾನದಲ್ಲ ಎಂದು ಸಮರ್ಥಿಸಿಕೊಂಡರು. ದೇಶದಲ್ಲಿ ನಡೆದ ಬಹುತೇಕ ಭಯೋತ್ಪಾದನಾ ಘಟನೆಗಳನ್ನೂ ಸಮರ್ಥಿಸಿಕೊಂಡರು. ಕಾಂಗ್ರೆಸ್ ಏನನ್ನು ಹೇಳಲು ಹೊರಟಿದೆ? ಭಯೋತ್ಪಾದಕರನ್ನು ಭಯೋತ್ಪಾದಕೆನ್ನಲು ಕಾಂಗ್ರೇಸಿಗೇಕೆ ಭಯ? ಕಾಂಗ್ರೆಸ್ ಆಡಳಿತಾವಧಿಯಲ್ಲಿ ಉಗ್ರ ಯಾಸಿನ್ ಮಲಿಕ್‌ಗೆ ಪ್ರಧಾನಿಗಳ ಕಚೇರಿಯವರೆಗೂ ಸಂಪರ್ಕ-ಸಂಬಂಧ-ಬಾಂಧವ್ಯವಿತ್ತು‌.

ಕಾಂಗ್ರೆಸ್ ಸರ್ಕಾರವಿಲ್ಲದಿರುವ ಈಗ ಪೊಲೀಸರು ಉಗ್ರರು ಯಾರು ಎಂದು ಡಿ.ಕೆ.ಶಿವಕುಮಾರ್ ರನ್ನು ಕೇಳಿ ನಿರ್ಧರಿಸಬೇಕೆಂದರೆ, ಅಧಿಕಾರವಿದ್ದಾಗ ಎಷ್ಟು ಉಗ್ರರನ್ನು ಧರ್ಮ ಪ್ರಚಾರಕರನ್ನಾಗಿಸಿರಬಹುದು?

ಓಲೈಕೆ ರಾಜಕಾರಣದ ಕುಳಿಗೆ ಬಿದ್ದ ಕಾಂಗ್ರೆಸಿಗೆ ಸ್ವತಃ ತಾನೇ ಕುಳಿಗೆ ಬಿದ್ದಿದೆ ಕುಕ್ಕರ್ ಬಾಂಬ್ ಸ್ಪೋಟವನ್ನು ಸಮರ್ಥಿಸುವ ಮೂಲಕ ಕರ್ನಾಟಕವನ್ನು ಭಯೋತ್ಪಾದಕರ ಸ್ವರ್ಗ ಮಾಡಲುಹೊರಟಿದೆ. ಮುಂದಿನ ಚುನಾವಣೆಯಲ್ಲಿ “ಸ್ಪೋಟಕ್ಕೆ ಬೆಂಬಲ”, “ಸ್ಪೋಟಕ್ಕೆ ಸಮರ್ಥನೆ” ಕಾಂಗ್ರೆಸ್ ಪ್ರಣಾಳಿಕೆಯಲ್ಲಿದ್ದರೂ ಆಶ್ಚರ್ಯವಿಲ್ಲ! ಉಗ್ರರನ್ನು ಉಗ್ರ ಎಂದು ಕರೆದರೆ ಬೇಸರವಾಗುವುದು ಉಗ್ರನ ತಂದೆ, ತಾಯಿಗೆ ಅಥವಾ ಡಿ.ಕೆ.ಶಿವಕುಮಾರ್ ಗೆ ಮಾತ್ರ. ಈಗ ಜನರು ನಿರ್ಧರಿಸಬೇಕಿದೆ. ಉಗ್ರರನ್ನು ಮಟ್ಟಹಾಕುವ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಬಿಜೆಪಿ ಸರ್ಕಾರ ಬೇಕೋ, ಉಗ್ರರು-ರೌಡಿಗಳ ಪಾಲನೆ ಪೋಷಣೆ ಮಾಡಿ ಉಗ್ರರನ್ನು ಬ್ರದರ್ಸ್ ಎನ್ನುವ ಕಾಂಗ್ರೆಸ್ ಬೇಕೋ? ಎಂದು ಬಿಜೆಪಿ ಕೇಳಿದೆ.

*ವೋಟರ್ ಐಡಿ ಹಗರಣ ಹೊರ ಬರುತ್ತಿದ್ದಂತೆ ಅಲ್ಲಿ ಕುಕ್ಕರ್ ಬಾಂಬ್ ಸ್ಫೋಟ…! – ಡಿ.ಕೆ.ಶಿವಕುಮಾರ ಆರೋಪ*

https://pragati.taskdun.com/d-k-shivakumarmangalore-bomb-blast-casestatment/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button