ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ಸಚಿವ ಸಂಪುಟ ಪುನಾರಚನೆಗೆ ಹೈಕಮಾಂಡ್ ಒಲವು ತೋರಿದೆ ಎಂಬ ವಿಚಾರದ ಬೆನ್ನಲ್ಲೇ ಗೃಹ ಸಚಿವ ಅರಗ ಜ್ಞಾನೇಂದ್ರ ದಿಢೀರ್ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ ಎಂದು ತಿಳಿದುಬಂದಿದೆ.
ಸಿಎಂ ಬಸವರಾಜ್ ಬೊಮ್ಮಾಯಿ ಹಾಗೂ ಬಿಜೆಪಿ ಹೈಕಮಾಂಡ್ ಸೂಚನೆಯ ಮೇರೆಗೆ ಸಚಿವ ಅರಗ ಜ್ಞಾನೇಂದ್ರ ದೆಹಲಿಗೆ ತೆರಳುತ್ತಿದ್ದು, ಸಚಿವರ ಈ ನಡೆ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಪದೇ ಪದೇ ವೈಫಲ್ಯವಾಗುತ್ತಿದ್ದು, ಗೃಹ ಸಚಿವರ ಹೇಳಿಕೆಗಳು, ಕಾರ್ಯವೈಖರಿಯ ಬಗ್ಗೆ ವಿಪಕ್ಷಗಳು ಹಿಗ್ಗಾ ಮುಗ್ಗಾ ವಾಗ್ದಾಳಿ ನಡೆಸುತ್ತಿರುವುದೂ ಅಲ್ಲದೇ ಗೃಹ ಸಚಿವರ ರಾಜೀನಾಮೆಗೂ ಒತ್ತಾಯಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿಯೇ ಹೈಕಮಾಂಡ್ ಸೂಚನೆ ಮೇರೆಗೆ ಗೃಹ ಸಚಿವರು ದಿಢೀರ್ ದೆಹಲಿಯತ್ತ ಪ್ರಯಾಣಿಸಿರುವುದು ಬದಲಾವಣೆಯಾಗಲಿದೆಯೇ ಗೃಹ ಸಚಿವ ಅರಗ ಜ್ಞಾನೇಂದ್ರ ಅವರ ಖಾತೆ? ಎಂಬ ಚರ್ಚೆಗೆ ಕಾರಣವಾಗಿದೆ.
ಪಿಎಸ್ ಐ ಅಕ್ರಮ; ಮತ್ತೋರ್ವ ಕಾಂಗ್ರೆಸ್ ಮುಖಂಡ ಸಿಐಡಿ ವಶಕ್ಕೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ