
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಭಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಆರೋಪಿಗಳಿಗೆ ಜೈಲಿನಲ್ಲಿ ರಾಜಾತಿಥ್ಯ ಲಭ್ಯವಾಗುತ್ತಿದೆ ಎಂಬ ಆರೋಪ ಹಿನ್ನೆಲೆಯಲ್ಲಿ ಇಂದು ಗೃಹ ಸಚಿವ ಅರಗ ಜ್ಞಾನೇಂದ್ರ ಪರಪ್ಪನ ಅಗ್ರಹಾರ ಜೈಲಿಗೆ ದಿಢೀರ್ ಭೇಟಿ ನೀಡಿ, ಖುದ್ದು ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರಿನ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿಗೆ ದಿಢೀರ್ ಭೇಟಿ ನೀಡಿದ ಗೃಹ ಸಚಿವರು, ಕೈದಿಗಳ ಬ್ಯಾರಕ್ ಗಳ ತಪಾಸಣೆ ನಡೆಸಿದರು. ಈ ವೇಳೆ ಕೊಲೆ ಆರೋಪಿಗಳಿಗೆ ಮೊಬೈಲ್ ಹಾಗೂ ಮಾದಕ ವಸ್ತುಗಳು ಲಭಿಸಿದ್ದಾದರೂ ಹೇಗೆ ಎಂದು ನೇರವಾಗಿ ಆರೋಪಿಗಳನ್ನು ಪ್ರಶ್ನಿಸಿದ್ದಾರೆ ಎಂದು ತಿಳಿದುಬಂದಿದೆ.
ಹರ್ಷನ ಹತ್ಯೆ ಪ್ರಕರಣದ ಆರೋಪಿಗಳು ಜೈಲಿನಿಂದಲೇ ಮೊಬೈಲ್ ನಲ್ಲಿ ವಿಡಿಯೋ ಕಾಲ್ ಮೂಲಕ ಮಾತನಾಡುತ್ತಿರುವ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಜೈಲಿನಲ್ಲಿ ಮೊಬೈಲ್, ಮಾದಕವಸ್ತು ಮತ್ತಿತರ ನಿಷೇಧಿತ ವಸ್ತುಗಳನ್ನು ಸಾಗಿಸಲಾಗುತ್ತಿದೆಯೇ? ಹಂತಕರ ಕೈಗೆ ಇಂತಹ ವಸ್ತುಗಳು ಸಿಗುತ್ತಿರುವುವುದು ನಿಜವೇ ಎಂಬ ಬಗ್ಗೆ ಪರಿಶೀಲನೆ ನಡೆಸಿದರು.
ಜೈಲಿನಲ್ಲಿ ಹೈಸೆಕ್ಯೂರಿಟಿ ಲೋಪದ ಬಗ್ಗೆ ವರದಿಯಾಗಿದ್ದು, ಈ ಬಗ್ಗೆಯೂ ಅಧಿಕಾರಿಗಳೊಂದಿಗೆ ಚರ್ಚಿಸಿ ಮಾಹಿತಿ ಪಡೆದರು.
ಮೂತ್ರ ವಿಸರ್ಜನೆಗೆ ಹೋದಾಗಲೇ ದಾಳಿ; ಬಿಜೆಪಿ ಮುಖಂಡನ ಮೇಲೆ ಮಾರಣಾಂತಿಕ ಹಲ್ಲೆ