ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಪುತ್ರ ಚಂದ್ರಶೇಖರ ಸಾವಿನ ತನಿಖೆಯನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ತಪ್ಪಿತಸ್ಥರು ಯಾರೇ ಇದ್ದರೂ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದರು.
ಶುಕ್ರವಾರ ಸುವರ್ಣ ವಿಧಾನಸೌಧ ಹೆಲಿಪ್ಯಾಡ್ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಂದ್ರಶೇಖರ್ ಸಾವು ಪ್ರಕರಣದ ಬಗ್ಗೆ ಮಾಜಿ ಸಿಎಂ ಯಡಿಯೂರಪ್ಪ ಹಾಗೂ ರೇಣುಕಾಚಾರ್ಯ ಸೇರಿದಂತೆ ಅವರ ಕುಟುಂಬಸ್ಥರು ಇದು ಸಾವಲ್ಲ ಕೊಲೆ ಎಂದು ಹೇಳುತ್ತಿದ್ದಾರೆ. ಈ ಕುರಿತು ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.
ಕೆಂಪೇಗೌಡರ 108 ಅಡಿ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆ ಮಾಡಲಿದ್ದಾರೆ. ನಾಡಿನಲ್ಲಿ ಕೀರ್ತಿ ತಂದ ಮಹನಿಯರಾದ ಚೆನ್ನಮ್ಮ, ಬಸವಣ್ಣ, ಕೃಷ್ಣ ದೇವರಾಯನ ಸ್ಥಳದಿಂದ ಮಣ್ಣನ್ನು ತರಬೇಕೆಂದು ಹೇಳಿ ಎಲ್ಲರನ್ನೂ ಒಟ್ಟಿಗೆ ಸೇರಿಸಬೇಕೆಂದು ಎಲ್ಲರೂ ಮೂರ್ನಾಲ್ಕು ಕಡೆಯಿಂದ ಮಣ್ಣು ತರುತ್ತಿದ್ದೇವೆ ಎಂದರು.
ಈ ವೇಳೆ ಸಚಿವರಾದ ನಾರಣಗೌಡ, ಡಾ. ಅಶ್ವತ್ಥನಾರಾಯಣ, ಆರ್. ಅಶೋಕ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ವಿದ್ಯುತ್ ತಂತಿ ತಗುಲಿ ಅಣ್ಣ-ತಮ್ಮ ದುರ್ಮರಣ
https://pragati.taskdun.com/latest/electric-shockbrothersdeathkolara/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ