ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಹಾರಾಷ್ಟ್ರದ ಸಚಿವರುಗಳಿಗೆ ಗೃಹ ಸಚಿವ ಅರಗ ಜ್ಞಾನೇಂದ್ರ ಖಡಕ್ ಎಚ್ಚರಿಕೆ ನೀಡಿದ್ದು, ಸಚಿವರಾಗಲಿ, ಸಾಮಾನ್ಯ ಜನರಾಗಲಿ ಕಾನೂನು ಎಲ್ಲರಿಗೂ ಒಂದೇ. ಜನರ ಭಾವನೆ ಕೆರಳಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪರೋಕ್ಷ ಸಂದೇಶ ರವಾನಿಸಿದ್ದಾರೆ.
ಮಹಾರಾಷ್ಟ್ರ ಸಚಿವರು ಬೆಳಗಾವಿಗೆ ಬರುವುದಾಗಿ ಹೇಳಿಕೆ ನೀಡಿರುವ ವಿಚಾರವಾಗಿ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಅರಗ ಜ್ಞಾನೇಂದ್ರ, ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ವಿಚಾರ ಸುಪ್ರೀಂ ಕೋರ್ಟ್ ನಲ್ಲಿ ನಡೆಯುತ್ತಿದೆ. ಇಂತಹ ಸಂದರ್ಭದಲ್ಲಿ ಮಹಾರಾಷ್ಟ್ರ ಸಚಿವರು ಬೆಳಗಾವಿಗೆ ಭೇಟಿ ನೀಡುವ ಅಗತ್ಯವಾದರೂ ಏನು? ಅಲ್ಲಿನ ಸಚಿವರು ಯಾವ ಸಂದರ್ಭದಲ್ಲಿ ಬರುತ್ತಿದ್ದಾರೆ? ಯಾವ ಸಮಯ, ಯಾಕೆ ಬರಬೇಕು ಎಂಬುದು ಮುಖ್ಯವಾಗುತ್ತದೆ ಎಂದರು.
ಯಾರೇ ಆಗಲಿ ಜನರ ಭಾವನೆ ಕೆರಳಿಸುವ ಕೆಲಸ ಮಾಡಬಾರದು. ಸಚಿವರಾಗಲಿ, ಸಾಮಾನ್ಯ ಯಾರೇ ಆಗಲಿ, ಕಾನೂನು ಎಲ್ಲರಿಗೂ ಒಂದೇ. ಶಾಂತಿಭಂಗ ಮಾಡಿದರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಮಹಾರಾಷ್ಟ್ರ ಸಚಿವರು ಬೆಳಗಾವಿಗೆ ಬರುವುದಿಲ್ಲ ಎಂಬುದು ನನ್ನ ಅನಿಸಿಕೆ. ಬೆಳಗಾವಿಗೆ ಬಂದು ಜನರ ಭಾವನೆ ಕೆರಳಿಸುವ ಕೆಲಸ ಮಾಡಿದ್ರೆ ಕ್ರಮಕೈಗೊಳ್ಳಲಾಗುವುದು ಎಂದು ಖಡಕ್ ಎಚ್ಚರಿಕೆ ನೀಡಿದರು.
ರಣಾಂಗಣವಾದ ಹಿರೇಬಾಗೆವಾಡಿ ರಸ್ತೆ; ಮಹಾರಾಷ್ಟ್ರ ವಾಹನಗಳ ಮೇಲೆ ಕರವೇ ಕಲ್ಲುತೂರಾಟ
https://pragati.taskdun.com/belagavihirebagewadikarave-protest/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ