Latest

ಒಂದೇ ದಿನದಲ್ಲಿ 62,538 ಜನರಲ್ಲಿ ಸೋಂಕು ಪತ್ತೆ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶಾದ್ಯಂತ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ ಬರೋಬ್ಬರಿ 62,538 ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 20.27 ಲಕ್ಷ ದಾಟಿದೆ.

ಇನ್ನು ಒಂದೇ ದಿನದಲ್ಲಿ 886 ಮಂದಿ ಸೋಂಕಿಗೆ ಬಲಿಯಾಗಿದ್ದು, ಸಾವಿನ ಸಂಖ್ಯೆ 41,585ಕ್ಕೇರಿದೆ. 6,07,384 ಮಂದಿ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

Home add -Advt

ಭಾರತದಲ್ಲಿ ಇದುವರೆಗೂ 13.60 ಲಕ್ಷ ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಕಳೆದ ಒಂದು ತಿಂಗಳಲ್ಲಿ ಕೊರೊನಾಗೆ 20 ಸಾವಿರಕ್ಕೂ ಹೆಚ್ಚು ಮಂದಿ ಬಲಿಗಿದ್ದಾರೆ. ಜಗತ್ತಿನಾದ್ಯಂತ ಸೋಂಕಿತರ ಸಂಖ್ಯೆ 1.90 ಕೋಟಿ ದಾಟಿದೆ. 7.12 ಲಕ್ಷ ಜನರು ಮಹಾಮಾರಿಗೆ ಬಲಿಯಾಗಿದ್ದಾರೆ.

Related Articles

Back to top button