
ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ರಾಜ್ಯಾದ್ಯಂತ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಯುತ್ತಿದ್ದು, ಈ ನಡುವೆ ಹುಬ್ಬಳ್ಳಿಯ ಪರೀಕ್ಷಾ ಕೇಂದ್ರದಲ್ಲಿ ಅವಘಡ ಸಂಭವಿಸಿದೆ. ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿಗಳ ಮೇಲೆ ಜೇನು ನೊಣ ದಾಳಿಯಿಟ್ಟಿದೆ.
ಹುಬ್ಬಳ್ಳಿಯ ಕೇಶ್ವಪುರದ ಸೇಂಟ್ ಮೈಕಲ್ ಸ್ಕೂಲ್ ನಲ್ಲಿ ಈ ಘಟನೆ ನಡೆದಿದೆ. ಕಿಡಿಗೇಡಿಗಳು ಪರೀಕ್ಷಾ ಕೇಂದ್ರದ ಬಳಿ ಇದ್ದ ಜೇನು ಗೂಡಿಗೆ ಕಲ್ಲು ಎಸೆದಿದ್ದಾರೆ. ಪರಿಣಾಮ ಜೇನು ನೋಣಗಳು ಪರೀಕ್ಷಾ ಕೇಂದ್ರದ ಒಳಗೆ ದಾಳಿಯಿಟ್ಟಿವೆ. ಜೇನು ದಾಳಿಯಿಂದ ಕಂಗೆಟ್ಟ ವಿದ್ಯಾರ್ಥಿಗಳು ಪರೀಕ್ಷೆ ಬಿಟ್ಟು ಕೊಠಡಿಯಿಂದ ಹೊರಗೋಡಿದ್ದಾರೆ.
ಅಷ್ಟರಲ್ಲಾಗಲೇ ಜೇನು ದಾಳಿಗೆ ಹಲವು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ವಿದ್ಯಾರ್ಥಿಗಳನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ರಾಜ್ಯದ ಜನತೆಗೆ ವಿದ್ಯುತ್ ದರ ಏರಿಕೆ ಶಾಕ್!