*ಸದ್ಗುರು ಶ್ರೀ ಮಧುಸೂದನ್ ಸಾಯಿ ಅವರಿಗೆ ಗೌರವ ಡಾಕ್ಟರೇಟ್: ಅಭಿನಂದಿಸಿದ ಬೆಳಗಾವಿ ಹುಕ್ಕೇರಿ ಶ್ರೀಗಳು*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 24ನೇ ಘಟಿಕೋತ್ಸವದಲ್ಲಿ ಚಿಕ್ಕಬಳ್ಳಾಪುರದ ಸಮೀಪದ ಮುದ್ದೇನಹಳ್ಳಿಯ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ ನ ಅಧ್ಯಕ್ಷರು ಆಗಿರುವ ಸದ್ಗುರು ಶ್ರೀ ಮಧುಸೂದನ್ ಸಾಯಿ ಅವರಿಗೆ ಗೌರವ ಡಾಕ್ಟರೇಟ್ ಲಭಿಸಿದ ಪ್ರಯಕ್ತ ಕರ್ನಾಟಕ ರಾಜ್ಯ ಬಿಸಿಯೂಟ ಸೇವಾ ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷರಾದ ಬೆಳಗಾವಿ ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಅವರು, ಸದ್ಗುರು ಮಧುಸೂದನ್ ಸಾಯಿ ಅವರು ಸಾಯಿಬಾಬಾ ಅವರ ಆದೇಶದಂತೆ ಇವತ್ತು 33 ದೇಶಗಳಲ್ಲಿ ಶೈಕ್ಷಣಿಕ, ಧಾರ್ಮಿಕವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅಲ್ಲದೆ, ಕರ್ನಾಟಕ ಸೇರಿದಂತೆ 90 ಲಕ್ಷ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಮಕ್ಕಳಿಗೆ ರಾಗಿ ಮಿಲ್ಟ್ ಉಚಿತವಾಗಿ ನೀಡುತ್ತಿರುವುದು ಅಭಿಮಾನದ ಸಂಗತಿ. ಪೂಜ್ಯರು ಬೆಳಗಾವಿಯಲ್ಲಿಯೂ ಕೂಡ ಶೈಕ್ಷಣಿಕ ಕ್ರಾಂತಿ ಮಾಡಲು ಪಾದಾರ್ಪಣೆ ಮಾಡುತ್ತಿರುವುದು ಅಭಿಮಾನದ ಸಂಗತಿ ಎಂದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಬಿಸಿಯೂಟ ಸೇವಾ ಸಂಸ್ಥೆಗಳ ಒಕ್ಕೂಟದ ಉಪಾಧ್ಯಕ್ಷರಾದ ನಾರಾಯಣ ಸ್ವಗಲಿ, ಸದಸ್ಯರಾದ ರಮೇಶ ದೇಶಪಾಂಡೆ, ಮಂಜುನಾಥ ಅಳವಣಿ, ಬಿ.ಓ. ತಿಪ್ಪೇಸ್ವಾಮಿ ಅವರು ಗೌರವಿಸಿ ಸತ್ಕರಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ