Kannada NewsKarnataka NewsLatest

ಮರ್ಯಾದಾ ಹತ್ಯೆ ಕೇಸ್: ಕರ್ತವ್ಯ ಲೋಪ; ಪೊಲೀಸ್ ವೃತ್ತ ನಿರೀಕ್ಷಕ ಅಮಾನತು

ಪ್ರಗತಿವಾಹಿನಿ ಸುದ್ದಿ; ಕೋಲಾರ: ಮರ್ಯಾದಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪವೆಸಗಿದ್ದ ಕಾಮಸಮುದ್ರ ಪೊಲೀಸ್ ವೃತ್ತ ನಿರೀಕ್ಷಕರನ್ನು ಅಮನತು ಮಾಡಿ ಆದೇಶ ಹೊರಡಿಸಲಾಗಿದೆ.

ಪಿ.ಜೆ.ಮಧುಕರ್ ಅಮಾನತುಗೊಂಡಿರುವ ಪೊಲೀಸ್ ವೃತ್ತ ನಿರೀಕ್ಷಕ. ಜೂನ್ 27ರಂದು ಕೋಲಾರ ಜಿಲ್ಲೆ ಬಂಗಾರಪೇಟೆಯ ಬೋಡಗುರ್ಕಿ ಗ್ರಾಮದಲ್ಲಿ ತಂದೆಯೇ ಮಗಳನ್ನು ಹತ್ಯೆ ಮಾಡಿದ ಕಾರಣಕ್ಕೆ ಮರ್ಯಾದಾ ಹತ್ಯೆ ಕೇಸ್ ದಾಖಲಾಗಿತ್ತು. ಪ್ರಕರಣದ ತನಿಖೆಯಲ್ಲಿ ಸಿಪಿಐ ಮಧುಕರ್ ಲೋಪವೆಸಗಿದ್ದರು ಎಂಬ ಆರೋಪ ಕೇಳಿಬಂದಿದೆ.

Home add -Advt

ಈ ಹಿನ್ನೆಲೆಯಲ್ಲಿ ಐಜಿಪಿ ರವಿಕಾಂತೇಗೌಡ, ಸಿಪಿಐ ಮಧುಕರ್ ರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.


Related Articles

Back to top button