Latest

ಕೊರೋನಾ ಬೆಡ್ ನಿಂದ ಹೊಲಕ್ಕಿಳಿದು ಟ್ರ್ಯಾಕ್ಟರ್ ಏರಿದ ಹೊರಟ್ಟಿ

ಪ್ರಗತಿವಾಹಿನಿ ಸುದ್ದಿ, ಹುಬ್ಬಳ್ಳಿ –  ಕೋವಿಡ್‌ನಿಂದ ಗುಣಮುಖರಾದ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ನೇರವಾಗಿ ಕೃಷಿ ಕಾಯಕದಲ್ಲಿ ತೊಡಗಿದ್ದಾರೆ. ತಮ್ಮ ಹೊಲದಲ್ಲಿ ಟ್ರ್ಯಾಕ್ಟರ್ ಓಡಿಸುವ ಮೂಲಕ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದಾರೆ.

ಕೋವಿಡ್ ಸೋಂಕಿಗೆ ತುತ್ತಾಗಿ ಹುಬ್ಬಳ್ಳಿಯ ಸರಕಾರಿ ಸಂಸ್ಥೆಯಾದ  ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿರುವ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರ ನೆಚ್ಚಿನ  ನಿಸರ್ಗ ತೋಟದ ಮನೆಯಲ್ಲಿದ್ದಾರೆ.  ತಮ್ಮ ತೋಟದಲ್ಲಿ ಕೃಷಿ ಕಾರ್ಯ ಚಟುವಟಿಕೆಗಳಲ್ಲಿ ನಿರತರಾಗಿದ್ದಾರೆ. ಹೊಲದಲ್ಲಿ ಸ್ವತಃ ಟ್ರ್ಯಾಕ್ಟರ್ ಮೂಲಕ ಉಳಿಮೆ ಮಾಡುತ್ತ ಮುಂಗಾರು ಬಿತ್ತನೆಗೆ ಸಿದ್ಧತೆ ನಡೆಸುತ್ತಿದ್ದಾರೆ.

ತಮ್ಮ ಸರಳ ವ್ಯಕ್ತಿತ್ವದ ಹೊರಟ್ಟಿ ಮೊದಲಿನಿಂದಲೂ ಕೃಷಿ ಮತ್ತು ಹೈನುಗಾರಿಕೆ ಬಗ್ಗೆ ಅಪಾರ ಆಸಕ್ತಿ ಹೊಂದಿದ್ದಾರೆ. ಕೋವಿಡ್ ಲಾಕ್‌ಡೌನ್ ಸಂದರ್ಭದಲ್ಲಿ ತಮ್ಮ ತೋಟದಲ್ಲಿಯ ಕೃಷಿ ಪೂರಕ ಚಟುವಟಿಕೆಗಳಲ್ಲಿ ಕ್ರಿಯಾಶೀಲವಾಗಿ ಪಾಲ್ಗೊಂಡಿದ್ದಾರೆ.

ಇಂದಿನ ಕೋವಿಡ್ ಪರಿಸ್ಥಿತಿಯಲ್ಲಿ ಸೋಂಕಿಗೆ ತುತ್ತಾಗಿರುವ ಶಿಕ್ಷಕರೂ ಸೇರಿದಂತೆ ಹಲವಾರು ನಾಗರಿಕರಿಗೆ ಪೂರಕ ಚಿಕಿತ್ಸೆ ದೊರಕಿಸುವುದರ ಜೊತೆಗೆ ಸೋಂಕಿತರಲ್ಲಿ ಆತ್ಮವಿಶ್ವಾಸ ಹಾಗೂ ಧೈರ್ಯ ತುಂಬುವ ಕೆಲಸ ಮಾಡುತ್ತಿದ್ದಾರೆ. ಜೊತೆಗೆ ಲಾಕ್‌ಡೌನ್ ಸಮಯದಲ್ಲಿ ಕಚೇರಿ ಕೆಲಸದ ಬದಲಾಗಿ ಕೃಷಿಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

ಬೆಳಗಾವಿ ಜಿಲ್ಲೆಯಲ್ಲಿ ಲಭ್ಯವಿರುವ ಕೊರೋನಾ ಬೆಡ್ ಮಾಹಿತಿ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button