Kannada NewsKarnataka NewsNational

*ಕಂಟೈನರ್ ಹಾಗೂ ಮಿನಿ ಟ್ರಕ್ ನಡುವೆ ಭೀಕರ ಅಪಘಾತ: ಆರು ಜನರ ಸಾವು*

ಪ್ರಗತಿವಾಹಿನಿ ಸುದ್ದಿ:  ಕಂಟೈನರ್ ಹಾಗೂ ಮಿನಿ ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಅಪಘಾತದ ರಬಸಕ್ಕೆ ಆರು ಜನ ಸಾವನ್ನಪ್ಪಿರುವ ಘಟನೆ ನಡೆದಿದೆ. 

ಈ ಅಪಘಾತದಲ್ಲಿ ಆರು ಮಂದಿ ಸಾವನ್ನಪ್ಪಿದ್ದರೆ ಐವರು ಗಾಯಗೊಂಡಿದ್ದಾರೆ. ಈ ಆಂದ್ರಪ್ರದೇಶದ ಅಮರಾವತಿಯ ಕೃಷ್ಣಾ ಜಿಲ್ಲೆಯ ಸೀತನಪಲ್ಲಿ ಗ್ರಾಮದ ಬಳಿ ಘಟನೆ ಶುಕ್ರವಾರ ಬೆಳಗ್ಗೆ ಸಂಭವಿಸಿದೆ.

ಮಿನಿ ಟ್ರಕ್‌ನಲ್ಲಿ ಮೀನುಗಳನ್ನು ಸಾಗಿಸಲಾಗುತ್ತಿತ್ತು. ಈ ವೇಳೆ ಎದುರು ದಿಕ್ಕಿನಿಂದ ಬಂದ ಕಂಟೈನರ್ ಹಾಗೂ ಮಿನಿ ಟ್ರಕ್ ನಡುವೆ ಡಿಕ್ಕಿ ಸಂಭವಿಸಿದೆ. ಈ ಅವಘಡದಲ್ಲಿ ಎರಡೂ ವಾಹನಗಳ ಚಾಲಕರು ಸೇರಿದಂತೆ ಮೂರು ಸ್ಥಳದಲ್ಲೇ ಮೃತಪಟ್ಟರೆ, ಮಿಕ್ಕವರು ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಸಾವನ್ನಪ್ಪಿದ್ದಾರೆ. ಗಾಯಗೊಂಡ ಐವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಬಗ್ಗೆ ಸುದ್ದಿ ತಿಳಿದು ಕೂಡಲೇ ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ರಕ್ಷಣಾ ಕಾರ್ಯಾಚರಣೆಗೆ ಮುಂದಾಗಿದ್ದಾರೆ. ಅಪಘಾತದಲ್ಲಿ ಎರಡು ವಾಹನಗಳ ಮುಂಭಾಗ ಸಂಪೂರ್ಣವಾಗಿ ಜಖಂಗೊಂಡಿದೆ. ಈ ಬಗ್ಗೆ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button