
ಪ್ರಗತಿವಾಹಿನಿ ಸುದ್ದಿ: ವಿವಾಹ ವಾರ್ಷಿಕೋತ್ಸವ ಹಿನ್ನೆಲೆ ಇಡಿ ಕುಟುಂಬವೂ ತಿರುಕ್ಕಡೈಯೂರ್ ದೇವಸ್ಥಾನಕ್ಕೆ ಹೋಗಿ, ವಾಪಸ್ ಬರುವಾಗ ಕಾರು ಅಪಘಾತದಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ತಮಿಳುನಾಡಿನ ತಿರಪುರ ಬಳಿ ಕಾರು ಮತ್ತು ಸರ್ಕಾರಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೆ ಕುಟುಂಬದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಯುಗಾದಿಯಂದೇ ಒಂದು ಕುಟುಂಬದ ಐವರು ಕೊನೆಯುಸಿರು ಎಳೆದಿದ್ದಾರೆ. ಅಪಘಾತದಿಂದ ಕೊಯಮತ್ತೂರು-ತಿರುಚ್ಚಿ ರಾಷ್ಟ್ರೀಯ ಹೆದ್ದಾರಿಯಲ್ಲಿ 4 ಗಂಟೆಗಳ ಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ