
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಂ ಬೆಳಗ್ಗೆ ಲಾರಿ-ಕಾರು ಮಧ್ಯೆ ಅಪಘಾತ ಸಂಭವಿಸಿದ್ದು, ಅಪಘಾತದ ರಭಸಕ್ಕೆ ಪತಿ ಎದುರೆ ಪತ್ನಿ ಸಾವನ್ನಪ್ಪಿರುವ ಘಟನೆ ಸಂಭವಿಸಿದೆ.
ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದ್ದು, ವೈದ್ಯ ದಂಪತಿ ಧಾರವಾಡದಿಂದ ಬೆಳಗಾವಿ ಕಡೆಗೆ ಬರುವಾಗ ಹಿರೇಬಾಗೇವಾಡಿ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಮೂಡಲಗಿ ತಾಲೂಕಿನ ಸಂಗಣಕೇರಿಯ ವೈದ್ಯೆ ಡಾ. ಆಶಾ ಕೋಳಿ (32) ಸ್ಥಳದಲ್ಲೇ ಸಾವಪ್ಪಿದ್ದಾಳೆ. ಆಶಾ ಪತಿ ಡಾ. ಭೀಮಪ್ಪ ಕೋಳಿ, ಚಾಲಕ ಮಹೇಶ ಖೋತ ಘಟನೆಯಲ್ಲಿ ಗಂಭೀರ ಗಾಯವಾಗಿದ್ದು, ಗಾಯಾಳುಗಳನ್ನು ಬೆಳಗಾವಿ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಲಾರಿ ಹಿಂಬದಿಗೆ ರಭಸವಾಗಿ ಕಾರು ಡಿಕ್ಕಿ ಹೊಡೆದಿದ್ದರಿಂದ ಕಾರಿನ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ. ಹಿರೇಬಾಗೇವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.