Cancer Hospital 2
Beereshwara 33
LaxmiTai 5

*ದೇವಿ ದರ್ಶನ ಮುಗಿಸಿ ಮನೆಗೆ ಹೋಗುವಾಗ ಭೀಕರ ಅಪಘಾತ: ನಾಲ್ವರ ಸಾವು*

Anvekar 3
GIT add 2024-1

ಪ್ರಗತಿವಾಹಿನಿ ಸುದ್ದಿ: ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದಿದ್ದು, ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೊಪ್ಪಳ ತಾಲೂಕಿನ ಹೊಸಳ್ಳಿ ಬಳಿ ನಡೆದಿದೆ. 

Emergency Service

ಘಟನೆಯಲ್ಲಿ 15 ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, ಕೂಡಲೇ ಗಾಯಾಳುಗಳನ್ನು ಕೊಪ್ಪಳ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತರು ಕೊಪ್ಪಳ ಜಿಲ್ಲೆಯ ಯಲಬರ್ಗಾ ತಾಲೂಕಿನ ಕರಮುಡಿ ಗ್ರಾಮದ ನಿವಾಸಿಗಳಾಗಿದ್ದು, ಹುಲಿಗೆಮ್ಮ ದೇವಸ್ಥಾನಕ್ಕೆ ತೆರಳಿದ್ದರು. ಕರಮುಡಿ ಗ್ರಾಮದ ಬಸವರಾಜ (22), ಮುತ್ತಪ್ಪ (22), ಗದಗ ಜಿಲ್ಲೆಯ ತಿಮ್ಮಾಪುರ ಗ್ರಾಮದ ನಿವಾಸಿ ಕೊಂಡಪ್ಪ (60) ಮತ್ತು ದುರುಗಮ್ಮ ಹನುಮಪ್ಪ (65) ಮೃತಪಟ್ಟಿದ್ದಾರೆ.

ಬಸ್‌ ಡಿಕ್ಕಿ ಹೊಡೆದ ರಭಸಕ್ಕೆ ಟ್ರ್ಯಾಕ್ಟರ್ ಪಲ್ಟಿಯಾಗಿದ್ದು ಸ್ಥಳದಲ್ಲಿಯೇ ಇಬ್ಬರು ಮೃತಪಟ್ಟಿದ್ದಾರೆ. ಇನ್ನಿಬ್ಬರು ಆಸ್ಪತ್ರೆಗೆ ಹೋಗುವ ಮಾರ್ಗಮಧ್ಯದಲ್ಲಿ ಮೃತಪಟ್ಟಿದ್ದಾರೆ. ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ ಎಂದು ಗೊತ್ತಾಗಿದೆ. ಗಾಯಗೊಂಡವರನ್ನು ತಡರಾತ್ರಿಯ ತನಕ ಜಿಲ್ಲಾಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಲಾಯಿತು. ಈ ಕುರಿತು ಮುನಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Bottom Add3
Bottom Ad 2