Kannada NewsLatestUncategorized

*ಮೀಸಲಾತಿ ಬಿಕ್ಕಟ್ಟು; ಕಾಂಗ್ರೆಸ್ ನಿಲುವಿನ ಬಗ್ಗೆ ಡಿ.ಕೆಶಿವಕುಮಾರ್ ಹೇಳಿದ್ದೇನು?*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಎಲ್ಲ ಪಕ್ಷಗಳಲ್ಲಿ ಟಿಕೆಟ್ ಆಕಾಂಕ್ಷಿಗಳು ಇರುತ್ತಾರೆ. ಬೇರೆ ಪಕ್ಷಗಳು ಸೋಲುತ್ತವೆ ಎಂದು ಆ ಪಕ್ಷಗಳಲ್ಲಿ ಟಿಕೆಟ್ ಆಕಾಂಕ್ಷಿಗಳು ಕಡಿಮೆ ಇದ್ದಾರೆ. ಕಾಂಗ್ರೆಸ್ ಗೆಲ್ಲುವ ಹಿನ್ನೆಲೆಯಲ್ಲಿ ನಮ್ಮ ಪಕ್ಷದಲ್ಲಿ ಆಕಾಂಕ್ಷಿಗಳು ಹೆಚ್ಚಾಗಿದ್ದಾರೆ. ಎಲ್ಲಾ ಕ್ಷೇತ್ರಗಳಲ್ಲಿ ಎಲ್ಲ ಆಕಾಂಕ್ಷಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಒಮ್ಮತ ಮೂಡಿಸಿ ಅಭ್ಯರ್ಥಿ ಆಯ್ಕೆಗಾಗಿ ಅರ್ಜಿಗಳನ್ನು ಸ್ಥಳೀಯ ಜಿಲ್ಲೆಗಳಿಗೆ ರವಾನಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದರು.

ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್, ಸರ್ಕಾರಕ್ಕೆ ಪಂಚಮಸಾಲಿ ಮೀಸಲಾತಿ ಬಿಕ್ಕಟ್ಟು ಎದುರಾಗಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಿಲುವೆನು ಎಂದು ಕೇಳಿದಾಗ, ‘ನಮ್ಮ ನಾಯಕರು ಈ ವಿಚಾರವಾಗಿ ಮಾತನಾಡಿದ್ದಾರೆ. ಉಳಿದಂತೆ ಯಾರೂ ಬಂದು ನಮ್ಮ ಬಳಿ ಚರ್ಚೆ ಮಾಡಿಲ್ಲ. ಸರ್ಕಾರ ಮೊದಲು ನಿಲುವು ಪ್ರಕಟಿಸಲಿ. ಕಾನೂನು ಅಡಚಣೆಗಳೇನು ಎಂಬುದು ಗೊತ್ತಿಲ್ಲ. ಈ ವಿಚಾರವಾಗಿ ಆಡಳಿತ ಪಕ್ಷ ತೀರ್ಮಾನ ಮಾಡಬೇಕು. ಕಾನೂನು ಏನಿದೆ ಎಂದು ಪರಿಶೀಲಿಸಿ ತೀರ್ಮಾನ ಕೈಗೊಳ್ಳಬೇಕು. ಮೀಸಲಾತಿ ಹೆಚ್ಚಳ ಮಾಡುವಂತೆ ಬಹಳ ಸಮಾಜಗಳು ಒತ್ತಾಯ ಮಾಡುತ್ತಿವೆ. ಪರಿಶಿಷ್ಟ ಜಾತಿಗೆ ಸೇರಿಸಬೇಕು ಎಂದು ಕುರುಬರು ಹೋರಾಟ ಮಾಡುತ್ತಿದ್ದಾರೆ. ಇನ್ನು ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಮೀಸಲಾತಿ ಹೆಚ್ಚಳದ ವಿಚಾರವಾಗಿ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿದೆ. ಆದರೆ 50 % ಮಿತಿ ಮೀರಿ ಮೀಸಲಾತಿ ನೀಡಲು ಸಾಧ್ಯವಿಲ್ಲ ಎಂದು ರಾಜ್ಯಸಭೆಯಲ್ಲಿ ಸಚಿವರು ಉತ್ತರ ನೀಡಿದ್ದಾರೆ. ಹೀಗೆ ಮೀಸಲಾತಿ ವಿಚಾರ ಗೊಂದಲದ ಗೂಡಾಗಿದೆ. ಹೀಗಾಗಿ ಕಾನೂನು ಅಂಶಗಳನ್ನು ಅರಿಯಲು ಎಐಸಿಸಿಯಿಂದ ಒಂದು ಸಮಿತಿ ಮಾಡಲಾಗಿದೆ. ನಾವೆಲ್ಲ ಚರ್ಚೆ ಮಾಡಿ ತೀರ್ಮಾನಕ್ಕೆ ಬರುತ್ತೇವೆ’ ಎಂದರು.

ಮೀಸಲಾತಿ ಹೆಚ್ಚಳ ಮಸೂದೆ ಮಂಡನೆ ವಿಚಾರವಾಗಿ ಕೇಳಿದ ಪ್ರಶ್ನೆಗೆ, ‘ಸರ್ಕಾರ ತರಾತುರಿಯಲ್ಲಿ ಮೀಸಲಾತಿ ಹೆಚ್ಚಳ ಮಾಡಿದೆ. ಅವರಿಗೆ ನಿಜಕ್ಕೂ ಕಾಳಜಿ ಇದ್ದಿದ್ದರೆ ಸಂಸತ್ತಿನಲ್ಲಿ ಮಸೂದೆ ಮಂಡಿಸಿ, ಸಂವಿಧಾನದ 9ನೇ ಶೆಡ್ಯೂಲ್ ಗೆ ಸೇರಿಸಿ ತಿದ್ದುಪಡಿ ತರಲಿ. ಅದನ್ನು ಮಾಡದೇ ಇಲ್ಲಿ ಏನೇ ಮಾಡಿದರೂ ಪ್ರಯೋಜನವಿಲ್ಲ. ಇಲ್ಲಿ ಕಾನೂನು ತರುತ್ತಿದ್ದೇವೆ ಎಂದು ಹೇಳುತ್ತಿದ್ದಾರೆ. ಹೇಗಿದ್ದರೂ ಸಂಸತ್ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಈ ಕಾನೂನನ್ನು ಅಲ್ಲಿಗೆ ಕಳುಹಿಸಿ, ಅನುಮೋದನೆ ಪಡೆಯಲಿ. ಆತುರದಲ್ಲಿ ನಾವು ಮಾಡಿದ್ದೇವೆ ಎಂದು ತೋರಿಸಿಕೊಳ್ಳಲು ಈ ರೀತಿ ಮಾಡುತ್ತಿದ್ದಾರೆ. ಈ ಮೀಸಲಾತಿ ಹೆಚ್ಚಳ ವಿಚಾರವಾಗಿ ನಾಗಮೋಹನ್ ದಾಸ್ ಸಮಿತಿಯನ್ನು ರಚನೆ ಮಾಡಿದ್ದು ನಾವು’ ಎಂದು ಉತ್ತರಿಸಿದರು.

*5 IPS ಅಧಿಕಾರಿಗಳ ದಿಢೀರ್ ವರ್ಗಾವಣೆ*

Home add -Advt

 

https://pragati.taskdun.com/5-ips-officerstransfferstate-govt/

Related Articles

Back to top button