Latest
ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಹೆಚ್ಚಳ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶಾದ್ಯಂತ ಕೊರೊನಾ ಅಟ್ಟಹಾಸ ಮುಂದುವರೆದಿದೆ. ಕಳೆದ 24 ಗಂಟೆಯಲ್ಲಿ 78,524 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 68 ಲಕ್ಷ ಗಡಿ ದಾಟಿದೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಪ್ರಕಾರ, ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇದೀಗ 68,35,656ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 971 ಜನರು ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,05,526ಕ್ಕೆ ಏರಿಕೆಯಾಗಿದೆ.
9,02,425 ಕೊವಿಡ್ ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 58,27,705 ಸೋಂಕಿತರು ಕೊರೊನಾದಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ನಿನ್ನೆ ಒಂದೇ ದಿನ 11,94,321 ಜನರಿಗೆ ಕೊವಿಡ್ ಸ್ಯಾಂಪಲ್ ಟೆಸ್ಟ್ ಮಾಡಿಸಲಾಗಿದ್ದು, ಈವರೆಗೆ ದೇಶದಲ್ಲಿ 8,34,65,975 ಜನರಿಗೆ ಕೊವಿಡ್ ಪರೀಕ್ಷೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.




