Cancer Hospital 2
Beereshwara 33
LaxmiTai 5

ಭೀಕರ ರಸ್ತೆ ಅಪಘಾತ: ತ್ರಿಬಲ್ ರೈಡಿಂಗ್ ಮಾಡುತ್ತಿದ್ದ ಯುವಕರ ಸಾವು

Anvekar 3
GIT add 2024-1

ಪ್ರಗತಿವಾಹಿನಿ ಸುದ್ದಿ: ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಡೊಂಗರಗಾಂವ ಕ್ರಾಸ್‌ ಬಳಿ ಯುವಕರು ತ್ರಿಬಲ್ ರೈಡಿಂಗ್ ಮಾಡುತ್ತಿದ್ದ ಬೈಕ್ ಮತ್ತು ಬಸ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಬಳಿ ಸಂಭವಿಸಿದೆ.

ಒಂದೇ ಬೈಕ್‌ನಲ್ಲಿ ಮೂವರು ಯುವಕರು ಕಲಬುರಗಿಯ ಕಮಲಾಪುರಕ್ಕೆ ತೆರಳುತ್ತಿದ್ದ ವೇಳೆ ಕಲಬುರಗಿಯಿಂದ ಹುಮ್ನಾಬಾದ್ ಗೆ ತೆರಳುತ್ತಿರುವ ವಿಜಯಪುರ- ಬಸವಕಲ್ಯಾಣ ಬಸ್ ಗೆ ಬೈಕ್ ಡಿಕ್ಕಿಯಾಗಿದೆ. ಕಿಣಿ ಸಡಕ್ ಗ್ರಾಮದ ಸಮೀರ್‌ ಜಮೀರ್‌ಸಾಬ್ (22), ವಿಶಾಲ್ ಸಂಜು ಕುಮಾರ್‌ ಜಾದವ್ (20), ಚಂದ್ರಕಾಂತ್ ನಿಂಗಪ್ಪ ಹೋಳಕುಂದಾ (23) ಮೃತಪಟ್ಟ ಯುವಕರು ಎಂದು ಗುರುತಿಸಲಾಗಿದೆ.

Emergency Service

ಡಿಕ್ಕಿಯಾದ ಪರಿಣಾಮ ರಸ್ತೆಗೆ ಬಿದ್ದ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಕಮಲಾಪುರ ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಕಮಲಾಪುರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

Bottom Add3
Bottom Ad 2