ಪ್ರಗತಿವಾಹಿನಿ ಸುದ್ದಿ, ಚಿತ್ರದುರ್ಗ – ಇಲ್ಲಿಯ ಹೊಳಲ್ಕೆರೆ ಬಳಿ ಬುಧವಾರ ಸಂಭವಿಸಿದ ಭೀಕರ ಅಪಘಾತಕ್ಕೆ ಗಂಡ, ಹೆಂಡತಿ ಹಾಗೂ ಇಬ್ಬರು ಮಕ್ಕಳು ಬಲಿಯಾಗಿದ್ದಾರೆ. ಇವರೆಲ್ಲ ಚನ್ನಗಿರಿ ತಾಲೂಕಿನ ನಿವಾಸಿಗಳಾಗಿದ್ದರು.
ಒಂದೇ ಬೈಕ್ ನಲ್ಲಿ ನಾಲ್ವರು ಪ್ರಯಾಣಿಸುತ್ತಿದ್ದರು. ಈ ವೇಳೆ ಖಾಸಗಿ ಬಸ್ ಒಂದು ಡಿಕ್ಕಿ ಹೊಟೆದು ಅಪಘಾತ ಸಂಭವಿಸಿದೆ. ಎಲ್ಲರೂ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ಹೊಳಲ್ಕೆರೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.
ಆಶಾ ಕಾರ್ಯಕರ್ತೆಯರಿಗೆ ತೀವ್ರ ಮುಜುಗರಕ್ಕೆ ಕಾರಣವಾಗಿದೆ ಜಾಗೃತಿ ಕಿಟ್‌ನಲ್ಲಿರುವ ಆ ವಸ್ತು !
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ