*ಪ್ರಧಾನಿ ಮೋದಿಯಿಂದ ಉದ್ಘಾಟನೆ ಆಗಬೇಕಿದ್ದ ಎಕ್ಸ್‌ಪ್ರೆಸ್‌ವೆನಲ್ಲಿ ಭೀಕರ ಸರಣಿ ಅಪಘಾತ*

ಪ್ರಗತಿವಾಹಿನಿ ಸುದ್ದಿ: ನಾಳೆ ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಬೇಕಿದ್ದ ದೆಹಲಿ-ಡೆಹ್ರಾಡೂನ್ ಎಕ್ಸ್‌ಪ್ರೆಸ್‌ವೇಯ ಮೋಹಂದ್ ರೇಂಜ್‌ನಲ್ಲೀ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಬಿಹಾರಿಗಢ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹಠಾತ್ ಬ್ರೇಕ್ ವೈಫಲ್ಯ ಮತ್ತು ಅನಿಯಂತ್ರಿತ ವೇಗದಿಂದಾಗಿ ಭೀಕರ ಅಪಘಾತ ಸಂಭವಿಸಿದೆ. ಎಲ್‌ಪಿಜಿ ಸಿಲಿಂಡರ್‌ಗಳನ್ನು ಸಾಗಿಸುತ್ತಿದ್ದ ಟ್ರಕ್ ಕಾರುಗಳಿಗೆ ಡಿಕ್ಕಿ ಹೊಡೆದು ಹಾನಿಗೊಳಗಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರು ಹಾಗೂ ರಕ್ಷಣಾ ತಂಡಗಳು ಕಾರ್ಯಾಚರಣೆ ನಡೆಸಿ ಗಾಯಾಳುಗಳನ್ನ ಆಸ್ಪತ್ರೆಗೆ ಸಾಗಿಸಿದ್ದಾರೆ.
ಅಪಘಾತದ ತೀವ್ರತೆಗೆ ಎಲ್‌ಪಿಜಿ ತುಂಬಿದ್ದ ಟ್ರಕ್ ಹಿಂಬದಿಯಿಂದ ಡಿಕ್ಕಿ ಹೊಡೆದ ರಭಸಕ್ಕೆ ಕಾರುಗಳು ಸಂಪೂರ್ಣ ನಜ್ಜುಗುಜ್ಜಾಗಿವೆ. ಈ ವೇಳೆ ಕೆಲಕಾಲ ರಸ್ತೆಯಲ್ಲಿ ಸಂಚಾರಕ್ಕೆ ಅಡಚಣೆಯೂ ಆಗಿದೆ. ಈ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲೂ ಹರಿದಾಡುತ್ತಿವೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




