Election NewsKannada NewsKarnataka NewsNationalPolitics
		
	
	
ಆಸ್ಪತ್ರೆಗೆ ದಾಖಲಾದ ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ: ಐಸಿಯುನಲ್ಲಿ ಚಿಕಿತ್ಸೆ

ಪ್ರಗತಿವಾಹಿನಿ ಸುದ್ದಿ: ತೀವ್ರ ಅಸ್ವಸ್ಥ ಆಗಿರುವ ಕಾರಣ ಚಾಮರಾಜನಗರ ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸೋಮವಾರ ರಾತ್ರಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಧುಮೇಹ ಮುಂತಾದ ವಯೋಸಹಜ ಖಾಯಿಲೆಗಳಿಂದ ನರಳುತ್ತಿದ್ದ ಶ್ರೀನಿವಾಸ್ ಪ್ರಸಾದ್ ಇದ್ದಕ್ಕಿದ್ದಂತೆಯೇ ತೀವ್ರವಾಗಿ ಅನಾರೋಗ್ಯಕ್ಕೀಡಾಗಿದ್ದರು. ಆಸ್ಪತ್ರೆಗೆ ದಾಖಲಾದ ನಂತರ ಕೃತಕ ಉಸಿರಾಟದ ವ್ಯವಸ್ಥೆ ಮಾಡಿ ಅವರನ್ನು ಐಸಿಯುನಲ್ಲಿ ನಿಗಾ ವಹಿಸಲಾಗುತ್ತಿದೆ. ಡಾ. ಸುದರ್ಶನ್ ಬಲ್ಲಾಳ್ ಎಂಬ ವೈದ್ಯರು ಶ್ರೀನಿವಾಸ್ ಪ್ರಸಾದ್ ಅವರ ಆರೋಗ್ಯ ತಪಾಸಣೆ ನಡೆಸುತ್ತಿದ್ದಾರೆ.
					
				
					
					
					
					
					
					
					