Latest

ರಾಜ್ಯದಲ್ಲಿ ಹೆಚ್ಚಲಿದೆ ಬಿಸಿಗಾಳಿ; ಕೆಲವೆಡೆ ಏ.27ರವರೆಗೆ ಭಾರೀ ಮಳೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಈಗಾಗಲೇ ಬಿಸಿಲ ಝಳಕ್ಕೆ ಜನ, ಜಾನುವಾರುಗಳು ಕಂಗಾಲಾಗಿದ್ದು ರಾಜ್ಯದ ಹಲವು ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಬಿಸಿ ಗಾಳಿ ಅಬ್ಬರ ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕೆಲವೆಡೆ ಏಪ್ರಿಲ್ 27ರವರೆಗೆ ಗುಡುಗು, ಸಿಡಿಲು ಸಹಿತ ಭಾರೀ ಪ್ರಮಾಣದಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಸಹ ನೀಡಲಾಗಿದೆ.

Home add -Advt

ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಹಗುರ ಮಳೆಯಾಗಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಗದಗ, ಹಾವೇರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ಒಣಹವೆ ಮತ್ತು ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

ರಾಯಚೂರು, ಯಾದಗಿರಿಯಲ್ಲಿ ಹಗುರ ಮಳೆಯಾಗಲಿದೆ. ವಿಜಯಪುರ,, ಕೊಪ್ಪಳ ಮತ್ತು ಹಾವೇರಿಯಲ್ಲಿ ಒಣಹವೆಯ ಮುನ್ಸೂಚನೆ ನೀಡಲಾಗಿದೆ. ಇಂದು ಕೆಲವೆಡೆ ಸಾಮಾನ್ಯಕ್ಕಿಂತ ಉಷ್ಣಾಂಶವು 2-3 ಡಿಗ್ರಿ ಸೆಲ್ಸಿಯಸ್‌ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಸಹ ಹವಾಮಾನ ವರದಿ ತಿಳಿಸಿದೆ.

ದಕ್ಷಿಣ ಒಳನಾಡು ಪ್ರದೇಶದಲ್ಲಿ ಒಣಹವೆ ಇರಲಿದ್ದು, ಬೆಂಗಳೂರು, ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರಗಳಲ್ಲಿ ಗುಡುಗು ಮಿಂಚು ಸಹಿತ ಹಗುರ ಮಳೆಯಾಗುವ ಸಾಧ್ಯತೆಯಿದೆ. ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನದಲ್ಲಿ ಒಣಹವೆ ಇದ್ದು, ಕೊಡಗು, ಕೋಲಾರ, ಮೈಸೂರು, ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿ ಹಗುರ ಮಳೆಯಾಗಲಿದೆ. ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಒಣಹವೆ ಮುಂದುವರೆಯಲಿದೆ. ಕೆಲವೆಡೆ ತಾಪಮಾನ ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್‌ ಹೆಚ್ಚಾಗುವ ಸಾಧ್ಯತೆ ಇದೆ.

https://pragati.taskdun.com/lokayukta-attacks-at-dawn-in-different-parts-of-the-state/
https://pragati.taskdun.com/four-watermen-who-went-down-to-the-river-to-remove-shells/

https://pragati.taskdun.com/another-cheetah-death-brought-to-kuno-national-park/

Related Articles

Back to top button