Latest

*ಹೋಟೆಲ್ ತಿಂಡಿ-ಊಟದ ದರ ಇನ್ನಷ್ಟು ಹೆಚ್ಚಳ? ; ಕೈ-ಬಾಯಿ ಸುಡಲಿದೆ ಬೆಲೆ ಏರಿಕೆಯ ಬಿಸಿ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಿಲಿಂಡರ್ ದರ ಏರಿಕೆ ಹಿನ್ನೆಲೆಯಲ್ಲಿ ಹೋಟೆಲ್ ತಿಂಡಿ ದರ ಕೂಡ ಹೆಚ್ಚಳವಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಬೆಗಳೂರಿನಲ್ಲಿ ಇಂದು ಹೋಟೆಲ್ ಮಾಲೀಕರ ಸಂಘದ ಸಭೆ ನಡೆಯಲಿದೆ.

ಮಧ್ಯಾಹ್ನ 2 ಗಂಟೆಗೆ ಬೆಂಗಳೂರು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಪಿ.ಸಿ.ರಾವ್ ನೇತೃತ್ವದಲ್ಲಿ ಸಭೆ ನಡೆಯಲಿದೆ. ಸಭೆಯಲ್ಲಿ ಹೋಟೆಲ್ ಊಟ-ತಿಂಡಿ ಬೆಲೆ ಏರಿಸುವ ಬಗ್ಗೆ ಚರ್ಚೆ ನಡೆಯಲಿದೆ.

ಪ್ರತಿ ತಿಂಡಿ ಬೆಲೆ 5ರಿಂದ 10 ರೂಪಾಯಿ ಏರಿಕೆಯಾಗುವ ಸಾಧ್ಯತೆ ಇದೆ. ಉತ್ತರ ಭಾರತದ ತಿಂಡಿಯ ಬೆಲೆ 10 ರೂಪಾಯಿ ಏರಿಕೆಯಾಗುವ ಸಾಧ್ಯತೆ ಇದೆ. ಸಭೆಯಲ್ಲಿ ನಗರದ ಎಲ್ಲಾ ಹೋಟೆಲ್ ಮಾಲೀಕರು ಭಾಗಿಯಾಗಲಿದ್ದಾರೆ. ಅಗತ್ಯವಸ್ತುಗಳ ಬೆಲೆ ಏರಿಕೆ ಬಿಸಿ ನಡುವೆ ಇನ್ಮುಂದೆ ಹೋಟೆಲ್ ತಿಂಡಿಗಳ ಬೆಲೆ ಏರಿಕೆಯಾಗಲಿದ್ದು, ಕೈ ಸುಡುವ ಸಾಧ್ಯತೆ ಇದೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button