Kannada NewsKarnataka NewsLatest
*ಹೋಟೆಲ್ ಸ್ವಿಮ್ಮಿಂಗ್ ಪೂಲ್‌ನಲ್ಲಿ ವಿದ್ಯುತ್ ಅವಘಡ*: *ಇಬ್ಬರು ವಿದೇಶಿಗರ ಸಾವು*

ಪ್ರಗತಿವಾಹಿನಿ ಸುದ್ದಿ: ಹೋಟೆಲ್ ಸ್ವಿಮ್ಮಿಂಗ್ ಪೂಲ್ ನಲ್ಲಿ ವಿದ್ಯುತ್ ಅವಘಟ ಸಂಭವಿಸಿ ಇಬ್ಬರು ವಿದೇಶಿಗರು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.
ಬೆಂಗಳೂರಿನ ಹಲಸೂರಿನ ಖಾಸಗಿ ಪಂಚತಾರಾ ಹೋಟೆಲ್‌ನ ಈಜುಕೊಳದಲ್ಲಿ ವಿದ್ಯುತ್ ಸ್ಪರ್ಶಿಸಿ (ಎಲೆಕ್ಟ್ರಿಕ್ ಶಾಕ್) ಇಬ್ಬರು ವಿದೇಶಿಗರು ಸಾವನ್ನಪ್ಪಿದ್ದಾರೆ.
ಸ್ಲೋವಾಕಿಯಾ ಮೂಲದ ಓರಿಯಾಟ್ (45) ಹಾಗೂ ಡಚ್ ಮೂಲದ ಅಲೆಕ್ಸಾಂಡರ್ ಮ್ಯಾಕ್ಸಿಲನ್ (59) ಮೃತ ದುರ್ದೈವಿಗಳು. ಹೋಟೆಲ್ ಆಡಳಿತ ಮಂಡಳಿಯ ನಿರ್ಲಕ್ಷ್ಯವೇ ಕಾರಣವೆಂದು ಆರೋಪಿಸಿ ಮೃತರ ಪತ್ನಿ ದೂರು ನೀಡಿದ್ದು, ಹಲಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.




