Belagavi NewsBelgaum NewsKannada NewsKarnataka NewsLatestNational

*ಹೋಟೆಲ್, ಢಾಬಾಗಳ ಮೇಲೆ ದಾಳಿ; 29 ಗೃಹಬಳಕೆಯ ಸಿಲಿಂಡರ್ ಜಪ್ತಿ *

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಚಿಕ್ಕೋಡಿ ಪಟ್ಟಣದ ವಿವಿಧ ಹೋಟೆಲ್ ಹಾಗೂ ಢಾಬಾಗಳಲ್ಲಿ ಅನಧಿಕೃತವಾಗಿ ಬಳಕೆ ಮಾಡಲಾಗುತ್ತಿದ್ದ ಗೃಹಬಳಕೆ ಅನಿಲ ಸಿಲಿಂಡರ್‌ಗಳ ವಿರುದ್ಧ ಚಿಕ್ಕೋಡಿ ತಹಶಿಲ್ದಾರ ರಾಜೇಶ ಬುರ್ಲಿ  ನೇತೃತ್ವದಲ್ಲಿ  ದಾಳಿ ನಡೆಸಿ 29 ಸಿಲಿಂಡರ್ ವಶಕ್ಕೆ ಪಡೆಯಲಾಗಿದೆ.

ಈ ದಾಳಿ ವೇಳೆ ವಾಣಿಜ್ಯ ಉದ್ದೇಶಕ್ಕಾಗಿ ಗೃಹಬಳಕೆ ಸಿಲಿಂಡರ್‌ಗಳನ್ನು ಅಕ್ರಮವಾಗಿ ಬಳಸುತ್ತಿದ್ದುದು ಪತ್ತೆಯಾಗಿದ್ದು, ಒಟ್ಟು ಸುಮಾರು 29 ಸಿಲಿಂಡರ್‌ಗಳನ್ನು ಅಧಿಕಾರಿಗಳು ಜಪ್ತಿ ಮಾಡಿಕೊಳ್ಳಲಾಗಿದೆ.

ಗೃಹ ಬಳಕೆ ಗ್ಯಾಸ್ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಕ್ಕೆ ಬಳಸುವುದು ಕಾನೂನುಬಾಹಿರವಾಗಿದ್ದು, ಇಂತಹ ಅಕ್ರಮ ಚಟುವಟಿಕೆಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ತಹಶೀಲ್ದಾರ್ ರಾಜೇಶ ಬುರ್ಲಿ ಅವರು ಎಚ್ಚರಿಕೆ ನೀಡಿದ್ದಾರೆ. 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button