
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮಳೆಯ ಅಬ್ಬರಕ್ಕೆ ಸಾಲು ಸಾಲು ಅವಾಂತರಗಳು ಸೃಷ್ಟಿಯಾಗುತ್ತಿವೆ. ಧಾರಾಕಾರ ಮಳೆಯಿಂದಾಗಿ ಮನೆ ಗೋಡೆ ಕುಸಿದು ಬಿದ್ದು ಮಹಿಳೆ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ.
ಇಲ್ಲಿನ ಸೋಮವಾರಪೇಟೆ ತಾಲೂಕಿನ ಹಾನಗಲ್ಲು ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಸುಷ್ಮಾ (29) ಮೃತ ಮಹಿಳೆ. ಘಟನೆಯಲ್ಲಿ ಮನೆಯಲ್ಲಿದ್ದ ಇಬ್ಬರು ಮಕ್ಕಳು ಹಾಗೂ ಸುಷ್ಮಾ ಸಹೋದರ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮೃತ ಸುಷ್ಮಾ ಕಲಬುರಗಿ ಮೂಲದವರು. ಕೂಲಿ ಕೆಲಸಕ್ಕಾಗಿ ಸುಷ್ಮಾ ಕುಟುಂಬದವರು ಹಾನಗಲ್ಲು ಗ್ರಾಮಕ್ಕೆ ಬಂದು ನೆಲೆಸಿದ್ದರು ಎಂದು ತಿಳಿದುಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




