Kannada NewsKarnataka News

*ಮಳೆಗೆ ಕುಸಿದ ಮನೆ: ಮಲಗಿದ್ದ ವ್ಯಕ್ತಿ ಸ್ಥಳದಲ್ಲೆ ಸಾವು*

ಪ್ರಗತಿವಾಹಿನಿ ಸುದ್ದಿ: ಭಾರೀ ಮಳೆಗೆ ಮಣ್ಣಿನ ಮನೆ ಕುಸಿದು ಮಲಗಿದ್ದ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ಮುಸ್ತಾಕ ಮಕಬುಲ್ ಸಾಬ್ ಆವಟಿ (43)‌ ಎಂದು ಗುರುತಿಸಲಾಗಿದೆ. ಜೋರಾಗಿ ಸುರಿದ ಮಳೆಗೆ ಮಣ್ಣಿನ ಮನೆಯು ಏಕಾಏಕಿ ಕುಸಿದಿದೆ. ಅದೇ ಮನೆಯೊಳಗೆ ಮಲಗಿದ್ದ ವ್ಯಕ್ತಿ ಮೃತಪಟ್ಟಿದ್ದಾರೆ. ಮುಸ್ತಾಕ ಅವರ ಪತ್ನಿ ಹಾಗೂ ಮಕ್ಕಳು ಪಕ್ಕದ ಇನ್ನೊಂದು ಮನೆಯಲ್ಲಿದ್ದು ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇದೀಗ ಮಣ್ಣಿನ ಅವಶೇಷಗಳಡಿ ಸಿಲುಕಿದ‌ ಮೃತದೇಹವನ್ನು ಹೊರತೆಗೆಯಲಾಗಿದೆ. ತಹಸೀಲ್ದಾರ್‌ ಸದಾಶಿವ ಮುಕ್ಕೋಜಿ ಹಾಗೂ ಶಹರ್ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜಮಖಂಡಿ ನಗರದ ಶಹರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button