Latest

ಹೆಲಿಕಾಪ್ಟರ್ ದುರಂತ ಪ್ರಕರಣ; ಗಂಭೀರವಾಗಿ ಗಾಯಗೊಂಡಿದ್ದ ವರುಣ್ ಸಿಂಗ್ ಇನ್ನಿಲ್ಲ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಹೆಲಿಕಾಪ್ಟರ್ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವಾಯುಸೇನಾ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಡಿ.8ರಂದು ತಮಿಳುನಾಡಿನ ಕುನೂರು ಬಳಿ ನಡೆದಿದ್ದ ಸೇನಾ ಹೆಲಿಕಾಪ್ಟರ್ ದುರಂತದಲ್ಲಿ 14 ಜನರ ಪೈಕಿ 13 ಜನರು ಸಾವನ್ನಪ್ಪಿದ್ದರು. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವರುಣ್ ಸಿಂಗ್ ಬದುಕುಳಿದಿದ್ದರು. 8 ದಿನಗಳಿಂದ ಜೀವನ್ಮರಣದ ನಡುವೆ ಹೋರಾಟ ನಡೆಸಿದ್ದ ವರುಣ್ ಸಿಂಗ್ ಇದೀಗ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಸಿಡಿಎಸ್ ಬಿಪಿನ್ ರಾವತ್ ಸೇರಿದಂತೆ 14 ಜನರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತಮಿಳುನಾಡಿನ ಕುನೂರು ಬಳಿ ದುರಂತಕ್ಕೀಡಾಗಿತ್ತು. ಬಿಪಿನ್ ರಾವತ್, ಪತ್ನಿ ಮಧುಲಿಕಾ ರಾವತ್ ಸೇರಿದಂತೆ 13 ಜನರು ಸಾವನ್ನಪ್ಪಿದ್ದರು. ವಾಯುಸೇನಾ ಗ್ರೂಪ್ ಕ್ಯಾಪ್ಟನ್ ಆಗಿದ್ದ ವರುಣ್ ಸಿಂಗ್ ಬದುಕುಳಿದಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಬೆಂಗಳೂರಿನ ಕಮಾಂಡೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ವರುಣ್ ಸಿಂಗ್ ಕೊನೆಯುಸಿರೆಳೆದಿದ್ದಾರೆ.

ಕುಟುಂಬದವರ ವಿರುದ್ಧ ದೂರು ದಾಖಲಿಸಿದ ಹಿರಿಯ ನಟ ಅಶ್ವತ್ಥ ನಾರಾಯಣ

Home add -Advt

Related Articles

Back to top button