Latest

ಕಿಡ್ನಾಪ್ ಆಗಿದ್ದ ಅಪ್ರಾಪ್ತ ಬಾಲಕಿ ಬೆಂಗಳೂರಿನಲ್ಲಿ ಪತ್ತೆ

ಪ್ರಗತಿವಾಹಿನಿ ಸುದ್ದಿ; ಶಿರಸಿ: ಕಿಡ್ನ್ಯಾಪ್ ಆಗಿದ್ದ ಅಪ್ರಾಪ್ತ ಬಾಲಕಿಯನ್ನು ಉತ್ತರ ಕನ್ನಡ ಜಿಲ್ಲೆ ಬನವಾಸಿ ಪೋಲಿಸರು ಬೆಂಗಳೂರಿನಲ್ಲಿ ಪತ್ತೆ ಹಚ್ಚಿದ್ದು, ಪಾಲಕರಿಗೆ ಒಪ್ಪಿಸಿದ್ದಾರೆ.

ದುಷ್ಕರ್ಮಿಗಳು ಬಾಲಕಿಯನ್ನು ಪುಸಲಾಯಿಸಿ ಅಪಹರಿಸಿದ್ದಾರೆ ಎಂದು ಬನವಾಸಿ ಠಾಣೆಯಲ್ಲಿ ಬಾಲಕಿಯ ಪೋಷಕರು ದೂರು ನೀಡಿದ್ದರು. ಆರೋಪಿಯ ಪತ್ತೆಗೆ ಜಾಲ ಬೀಸಿದ್ದ ಪೋಲಿಸರಿಗೆ ಬಾಲಕಿ ಬೆಂಗಳೂರಿನಲ್ಲಿ ಇರುವುದು ಗೊತ್ತಾಗಿದೆ.

ಬಾಲಕಿ ಅಪಹರಿಸಿದ್ದ ಆರೋಪಿ ಕುಪ್ಪಗಡ್ಡೆಯ ಮಹಮ್ಮದ್ ಗೌಸ್ ಇಸ್ಮಾಯಿಲ್‌ಸಾಬ್ ಸವಣೂರು ಎಂಬುವವನನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ದಾಖಲಾಗಿ 24 ಗಂಟೆಯಲ್ಲಿ ಬಾಲಕಿಯನ್ನು ಪತ್ತೆ ಮಾಡಿರುವ ಬನವಾಸಿ ಪೊಲೀಸರ ಕಾರ್ಯಕ್ಕೆ ಶ್ಲಾಘನೆ ವ್ಯಕ್ತವಾಗಿದೆ.

ಶಿರಸಿ ಡಿವೈಎಸ್‌ಪಿ ರವಿ ನಾಯ್ಕ ಮಾರ್ಗದರ್ಶನದಲ್ಲಿ ಸಿಪಿಐ ರಾಮಚಂದ್ರ ನಾಯಕ, ಬನವಾಸಿ ಪಿಎಸ್‌ಐ ಹನುಮಂತ ಬಿರಾದಾರ್, ಸಿಬ್ಬಂದಿ ಸಂತೋಷ್ ತಳವಾರ, ಶಿವರಾಜ್ ಎಸ್ ಅವರು ಕಾರ್ಯಾಚರಣೆ ನಡೆಸಿದ್ದರು.

Home add -Advt

ಪ್ರವಾಸಕ್ಕೆ ಬಂದ ವ್ಯಕ್ತಿ ಸಮುದ್ರಪಾಲು

Related Articles

Back to top button