Karnataka News
*HSRP ನಂಬರ್ ಪ್ಲೇಟ್ ಅಳವಡಿಸದ ವಾಹನ ಸವಾರರಿಗೆ ಹೈಕೋರ್ಟ್ ಬಿಗ್ ರಿಲೀಫ್*

ಪ್ರಗತಿವಾಹಿನಿ ಸುದ್ದಿ: ಹೆಚ್ ಎಸ್ ಆರ್ ಪಿ-ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ಪ್ಲೇಟ್ ಅಳವಡಿಸದ ವಾಹನ ಸವಾರರಿಗೆ ಹೈಕೋರ್ಟ್ ಸಮಾಧಾನಕರ ಆದೇಶ ನೀಡಿದೆ. ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸದ ವಾಹನ ಸವಾರರ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳುವಂತಿಲ್ಲ ಎಂದು ತಿಳಿಸಿದೆ.
ಈ ಬಗ್ಗೆ ಮೇಲ್ಮನವಿ ವಿಚಾರಣೆ ನಡೆಸಿದ ಮುಖ್ಯ ನ್ಯಾ. ಎನ್.ವಿ.ಅಂಜಾರಿಯಾ ನೇತೃತ್ವದ ವಿಭಾಗೀಯ ಪೀಠ ಈ ಅಭಿಪ್ರಾಯ ಪಟ್ಟಿದ್ದು, ಮಧ್ಯಂತರ ಆದೇಶವನ್ನು ಡಿಸೆಂಬರ್ 4ರವರೆಗೆ ವಿಸ್ತರಿಸಿದೆ.
ಸರ್ಕಾರದ ಆದೇಶದಂತೆ ಈಗಾಗಲೇ ಬಹುತೇಕ ವಾಹನ ಸವಾರರು ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸಿದ್ದು, ಇದೀಗ ಕೋರ್ಟ್ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸದ ವಾಹನ ಸವಾರರ ವಿರುದ್ಧ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ತಿಳಿಸಿದೆ.




