
ಪ್ರಗತಿವಾಹಿನಿ ಸುದ್ದಿ: 18 ವರ್ಷಗಳ ಬಳಿಕ ರಾಯಲ್ ಚಾಲೇಂಜರ್ಸ್ ಬೆಂಗಳೂರು ತಂಡ ಐಪಿಎಲ್ ಕಪ್ ಗೆದ್ದಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವತಿಯಿಂದ ಆರ್ ಸಿಬಿ ಆಟಗಾರರಿಗೆ ಅಭಿನಂದನಾ ಸಮಾರಂಭ ಆಯೋಜಿಸಲಾಗಿದೆ.
ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ ಗಳ ಮೇಲೆ ಸಂಜೆ 4 ಗಂಟೆಗೆ ಆರ್ ಸಿಬಿ ಆಟಗಾರರನ್ನು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅಭಿನಂದಿಸಲಿದ್ದಾರೆ. ಸರ್ಕಾರದವತಿಯಿಂದ ಗೌರವಿಸಿ ಸನ್ಮಾನಿಸಲಾಗುತ್ತಿದೆ. ಬಳಿಕ ಆಟಗಾರರು ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ತೆರಳಲಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ತೆರೆದ ವಾಹನದಲ್ಲಿ ಆರ್ ಸಿಬಿ ಆಟಗರರ ಮೆರವಣಿಗೆ ಇಲ್ಲ. ಬಸ್ ನಲ್ಲಿಯೇ ಆಟಗಾರರು ವಿಧಾನಸೌಧಕ್ಕೆ ಬರಲಿದ್ದಾರೆ. ಅಭಿನಂದನಾ ಕಾರ್ಯಕ್ರಮದ ಬಳಿಕ ಬಸ್ ನಲ್ಲಿಯೇ ವಿಧನಸೌಧದಿಂದ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಆಟಗಾರರು ತೆರಳುತ್ತಾರೆ. ಯಾವುದೇ ತೆರೆದ ವಾಹನದಲ್ಲಿ ಮೆರವಣಿಗೆ ಇಲ್ಲ. ಭದ್ರತಾ ದೃಷ್ಟಿಯಿಂದಾಗಿ ಮೆರವಣಿಗೆ ಕಾರ್ಯಕ್ರಮಗಳನ್ನು ಮಾಡದಿರಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.
ಇನ್ನು ವಿಧಾನಸೌಧದಲ್ಲಿ ಅಭಿನಂದನಾ ಸಮಾರಂಭದ ವೇಳೆ ಕೇವಲ ಇಬ್ಬರು ಆತಗಾರರಿಗೆ ಮಾತ್ರ ಮಾತನಾಡಲು ಅವಕಾಶ ನೀಡಲಾಗುವುದು ಎಂದು ತಿಳಿಸಿದರು.