*ಬಾಣಂತಿಯರ ಸಾವು ಪ್ರಕರಣ: 25 ಲಕ್ಷ ರೂ ಪರಿಹಾರ ನೀಡಲು ಬಿಜೆಪಿ ಮಹಿಳಾ ಮೋರ್ಚಾ ಒತ್ತಾಯ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸಂಭವಿಸುತ್ತಿರುವ ಬಾಣಂತಿಯರ ಹಾಗೂ ಶಿಶುಗಳ ಸಾವಿನ ಪ್ರಕರಣಗಳನ್ನು ಖಂಡಿಸಿ ಬಿಜೆಪಿ ಮಹಿಳಾ ಮೋರ್ಚಾ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದೆ.
ಇಂದು ಬೆಳಗಾವಿಯ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಬಿಜೆಪಿ ಬೆಳಗಾವಿ ಮಹಾನಗರ ಮಹಿಳಾ ಮೋರ್ಚಾದ ಕಾರ್ಯಕರ್ತೆಯರು , ಸರ್ಕಾರಿ ಆಸ್ಪತ್ರೆಗಳಲ್ಲಿ ಸಾವನ್ನಪ್ಪಿದ ಬಾಣಂತಿಯರಿಗೆ 25 ಲಕ್ಷ ರೂ. ಪರಿಹಾರ ನೀಡಬೇಕು. ಸಾವನ್ನಪ್ಪಿದ ಬಾಣಂತಿಯರ ಅನಾಥ ಮಕ್ಕಳನ್ನು ದತ್ತು ತೆಗೆದುಕೊಳ್ಳಬೇಕು. ಸರ್ಕಾರಿ ಆಸ್ಪತ್ರೆಯಲ್ಲಿ ಬಾಣಂತಿಯರ ಸಾವುಗಳನ್ನು ತಡೆಯಲು ವಿಫಲವಾಗಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ದಿನೇಶ್ ಗುಂಡೂರಾವ ಅವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಬಳ್ಳಾರಿ, ಬೆಳಗಾವಿ, ತಿಪಟೂರು, ಬೆಂಗಳೂರು, ಕೊಪ್ಪಳ, ರಾಯಚೂರು, ಕಲಬುರಗಿಯಿಂದ ಬರುತ್ತಿರುವ ವರದಿಗಳ ಪ್ರಕಾರ ಸರ್ಕಾರ ಬಳಸುತ್ತಿರವು ಕಳಪೆ ಗುಣಮಟ್ಟದ ಔಷಧಿಗಳಿಂದ ಸಾವುಗಳು ಆಗುತ್ತಿದೆ ಹಾಗಾಗಿ ಸರ್ಕಾರ ಉನ್ನತ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ