Karnataka NewsPolitics

*ರಾಜ್ಯಪಾಲರಿಗೆ Z ಕೆಟಗರಿ ಭದ್ರತೆ ನೀಡಿದ ಕೇಂದ್ರ ಗುಪ್ತಚರ ಇಲಾಖೆ*

ಪ್ರಗತಿವಾಹಿನಿ ಸುದ್ದಿ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿರುವ ಬೆನ್ನಲ್ಲೇ ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ತೀವ್ರಗೊಳಿಸಿದೆ. ರಾಜ್ಯಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯಪಾಲರ ವಿರುದ್ಧ ಬೀದಿಗಿಳಿದು ಹೋರಾಟ ನಡೆಸುತ್ತಿದ್ದಾರೆ. ಈ ಎಲ್ಲಾ ಬೆಳವಣಿಗೆ ಬೆನ್ನಲ್ಲೇ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ Z ಕೆಟಗರಿ ಭದ್ರತೆ ನೀಡಲಾಗಿದೆ.

ರಾಜ್ಯಪಾಲರಿಗೆ ಕೇಂದ್ರ ಗುಪ್ತಚರ ಇಲಕಹೆ ಬಿಗಿ ಭದ್ರತೆ ಒದಗಿಸಿದ್ದು, ಬುಲೆಟ್ ಪ್ರೂಫ್ ಕಾರು ನೀಡಲಾಗಿದೆ. ಆಗಸ್ಟ್ 29ರಂದು ಎಲ್ಲಾ ಸಾರ್ವಜನಿಕ ಕಾರ್ಯಕ್ರಮಗಳನ್ನು ಕುದ ರಾಜ್ಯಪಾಲರು ಮುಂದೂಡಿದ್ದಾರೆ.

ಬಾಂಗ್ಲಾ ಪ್ರಧಾನಿಯಂತೆ ರಾಜ್ಯಪಾಲರು ದೇಶ ಬಿಟ್ಟು ಹೋಗಬೇಕಾಗುತ್ತದೆ ಎಂದು ಕಾಂಗ್ರೆಸ್ ನಾಯಕರು ರಾಜ್ಯಪಾಲರ ವಿರುದ್ಧ ವಾಗ್ದಾಳಿ ನಡೆಸಿದ್ದ ಬೆನ್ನಲ್ಲೇ ರಾಜ್ಯಪಾಲರಿಗೆ ಭದ್ರತೆ ಹೆಚ್ಚಿಸಲಾಗಿದೆ.

ರಾಜ್ಯಪಾಲ ಗೆಹ್ಲೋಟ್ ಅವರಿಗೆ z ಸೆಕ್ಯೂರಿಟಿ ಒದಗಿಸಲಾಗಿದೆ ಎಂದು ತಿಳಿದುಬಂದಿದೆ.

Home add -Advt

Related Articles

Back to top button