*ರಾಜ್ಯ ಸರ್ಕಾರದ ಖಜಾನೆ ಸಂಪೂರ್ಣ ಖಾಲಿಯಾಗಿದೆ: ಕೇಂದ್ರ ಸಚಿವ ಕುಮಾರಸ್ವಾಮಿ*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬೆಲೆ ಏರಿಕೆ ಮಾಡಿ, ಈಗ ಕೇಂದ್ರದ ಕಡೆ ಬೆಟ್ಟು ತೋರಿಸುತ್ತಿದೆ. ತೈಲ ಬೆಲೆ ಏರಿಕೆ ಕೇಂದ್ರದಲ್ಲಿ ಯಾಕೆ ಆಗಿಲ್ಲ, ಬರೀ ರಾಜ್ಯದಲ್ಲಿ ಮಾತ್ರ ಯಾಕೆ ಆಗಿರೋದು ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಆಕ್ರೋಶ ಹೊರಹಾಕಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು, ಕಳೆದ ಕೆಲ ತಿಂಗಳಿಂದ ರಾಜ್ಯ ಸರ್ಕಾರದ ಖಜಾನೆ ಸಂಪೂರ್ಣ ಬರಿದಾಗಿದೆ. ಇದರಿಂದ ಎಲ್ಲಾ ವಸ್ತುಗಳ ಬೆಲೆ ಏರಿಕೆ ಮಾಡಿದೆ ಸರ್ಕಾರದ ಪರಿಸ್ಥಿತಿ ಹೇಗಿದೆ ಎಂಬುದು ಇದರಿಂದಲೇ ಗೊತ್ತಾಗುತ್ತಿದೆ ಎಂದು ಕಿಡಿಕಾರಿದ್ದರು.
ಈಗಾಗಲೇ ಗ್ಯಾರಂಟಿಗೆ ಹಣ ಬೇಕು ಅಂತ ಬೆಲೆ ಏರಿಕೆ ಮಾಡಿದ್ದೇವೆ ಎಂದು ಸ್ವತಃ ಎಂಬಿ ಪಾಟೀಲ್ ಹೇಳಿದ್ದಾರೆ. ಈಗಾಗಲೇ ಸಿದ್ದರಾಮಯ್ಯ ಅವರ ಸರ್ಕಾರ, ಕಳೆದ ಎಂಟು ತಿಂಗಳಿಂದ ಹಾಲಿನ ಪ್ರೋತ್ಸಾಹ ಧನ ನೀಡಿಲ್ಲ, ಹೀಗೆ ಒಂದೊಂದಾಗಿ ಯೋಜನೆಗಳನ್ನು ಸರ್ಕಾರ ನಿಲ್ಲಿಸಲಿದೆ ಎಂದು ಕಿಡಿಕಾರಿದರು.
ಪ್ರಧಾನಿ ಮೋದಿ ನನ್ನ ಮೇಲೆ ನಂಬಿಕೆಯಿಟ್ಟು ಪ್ರಮುಖವಾದ ಎರಡು ಖಾತೆ ನೀಡಿದ್ದಾರೆ. ನನ್ನ ಇಲಾಖೆಯನ್ನು ಅರ್ಥ ಮಾಡಿಕೊಳ್ಳಲು ಸ್ವಲ್ಪ ಸಮಯ ಬೇಕು. ಆ ನಂತರ ಜನರಿಗೆ ಅನುಕೂಲವಾಗುವ ಕೆಲಸ ಮಾಡುತ್ತೇನೆ ಎಂದು ಕುಮಾರಸ್ವಾಮಿ ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ