National

*ಪವಿತ್ರ ಸ್ನಾನಕ್ಕೆ ತೆರಳಿದ್ದ 46 ಜನರ ಸಾವು*

ಪ್ರಗತಿವಾಹಿನಿ ಸುದ್ದಿ: ಜಿತಿಯಾ ಹಬ್ಬದ ಆಚರಣೆ ವೇಳೆ ನದಿಗಳಿಗೆ ಪವಿತ್ರ ಸ್ನಾನಕ್ಕೆ ತೆರಳಿದ್ದ 37 ಮಕ್ಕಳು, 7 ಮಹಿಳೆಯರು ಸೇರಿದಂತೆ 46 ಜನರು ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಬಿಹಾರದ ಹಲವೆಡೆ ನಡೆದಿದೆ.

ಪೂರ್ವ ಮತ್ತು ಪಶ್ಚಿಮ ಚಂಪಾರಣ್, ಔರಂಗಾಬಾದ್, ಕೈಮೂರ್, ಬಕ್ಸರ್, ಸಿವಾನ್, ರೋಹ್ರಾಸ್, ಸರನ್, ಪಾಟ್ನಾ, ವೈಶಾಲಿ, ಮುಜಾಫುರ, ಸಮಸ್ತಿಪುರ್, ಗೋಪಾಲ್‌ಗಂಜ್ ಮತ್ತು ಅರ್ವಾಲ್ ಜಿಲ್ಲೆಗಳಲ್ಲಿ ಈ ಘಟನೆ ನಡೆದಿದೆ. ಜಿತಿಯಾ ಹಬ್ಬವನ್ನು ತಾಯಂದಿರು ತಮ್ಮ ಮಕ್ಕಳ ಯೋಗಕ್ಷೇಮ ಮತ್ತು ಸಮೃದ್ಧಿಗಾಗಿ ಆಚರಿಸುತ್ತಾರೆ. ಮಕ್ಕಳು, ತಮ್ಮ ತಾಯಂದಿರೊಂದಿಗೆ ವಿವಿಧ ಜಲಮೂಲಗಳಲ್ಲಿ ಸ್ನಾನಕ್ಕೆ ತೆರಳಿದ್ದಾಗ ಈ ಅವಘಡಗಳು ಸಂಭವಿಸಿವೆ.

ಘಟನೆಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ. ಅಲ್ಲದೇ ಮೃತರ ಕುಟುಂಬಸ್ಥರಿಗೆ ತಲಾ 4 ಲಕ್ಷ ರೂ. ಪರಿಹಾರವನ್ನು ಘೋಷಿಸಿದ್ದಾರೆ.

ವಿಪತ್ತು ನಿರ್ವಹಣಾ ಇಲಾಖೆ (ಡಿಎಂಡಿ) ಅಧಿಕಾರಿಯೊಬ್ಬರು ಈ ಬಗ್ಗೆ ಮಾತನಾಡಿ, ಇಲ್ಲಿಯವರೆಗೆ 43 ಮೃತದೇಹಗಳನ್ನು ಹೊರ ತೆಗೆಯಲಾಗಿದೆ. ಸಂತ್ರಸ್ತರ ಕುಟುಂಬಕ್ಕೆ ತಲಾ 4 ಲಕ್ಷ ರೂ. ಪರಿಹಾರ ನೀಡಲಾಗುವುದು. ಅವುಗಳಲ್ಲಿ 8 ಕುಟುಂಬಕ್ಕೆ ಈಗಾಗಲೇ ಪರಿಹಾರ ವಿತರಿಸಲಾಗಿದೆ ಎಂದು ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button