Latest

ವಿಮ್ಸ್ ಆಸ್ಪತ್ರೆಯಲ್ಲಿ 3 ರೋಗಿಗಳ ದಾರುಣ ಸಾವು ಪ್ರಕರಣ; ನಿರ್ದೇಶಕ ಡಾ.ಗಂಗಾಧರ್ ಹೇಳಿದ್ದೇನು?

ಪ್ರಗತಿವಾಹಿನಿ ಸುದ್ದಿ; ಬಳ್ಳಾರಿ: ಬಳ್ಳಾರಿ ವಿಮ್ಸ್ ಅಸ್ಪತ್ರೆಯಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡ ಪರಿಣಾಮ ಐಸಿಯುನಲ್ಲಿದ್ದ ಮೂವರು ರೋಗಿಗಳು ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ.

ನಿನ್ನೆ ಇಡೀ ದಿನ ಆಸ್ಪತ್ರೆಯಲ್ಲಿ ವಿದ್ಯುತ್ ಕಡಿತಗೊಂಡಿದೆ. ರಾತ್ರಿ ವೇಳೆಗೆ ಐಸಿಯು ವಾರ್ಡ್ ನಲ್ಲಿ ಇದ್ದ ಮೂವರು ರೋಗಿಗಳು ದಾರುಣವಾಗಿ ಸಾವನ್ನಪ್ಪಿದ್ದಾರೆ. ವಿದ್ಯುತ್ ಇಲ್ಲದೇ ಹಲವು ರೋಗಿಗಳು ಆಸ್ಪತ್ರೆಯಲ್ಲಿ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ವಿಮ್ಸ್ ಆಡಳಿತ ಮಂಡಳಿ ವಿರುದ್ಧ ರೋಗಿಗಳು, ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆ ಬೆನ್ನಲ್ಲೇ ಆಸ್ಪತ್ರೆಯಲ್ಲಿದ್ದ ರೋಗಿಗಳನ್ನು ಬೇರೆ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ವಿಮ್ಸ್ ನಿರ್ದೇಶಕರು ರೋಗಿಗಳ ಸಾವಿನ ಬಗ್ಗೆ ಬೇರೆಯೇ ಕಾರಣಗಳನ್ನು ನಿಡಿ ಪ್ರಕಟಣೆ ಹೊರಡಿಸಿದ್ದಾರೆ.

ವಿಮ್ಸ್ ಆಸ್ಪತ್ರೆಯಲ್ಲಿ ರಾತ್ರಿ ಮೂರು ರೋಗಿಗಳು ಸಾವನ್ನಪ್ಪಿದ್ದಾರೆ. ಆದರೆ ಯಾರೂ ವಿದ್ಯುತ್ ಕಡಿತದ ಕಾರಣದಿಂದ ಸಾವನ್ನಪ್ಪಿಲ್ಲ. ಮೂವರೂ ತೀವ್ರ ಆರೋಗ್ಯ ಸಮಸ್ಯೆಯಿಂದ ಮೃತಪಟ್ಟಿದ್ದಾರೆ ಎಂದು ವಿಮ್ಸ್ ನಿರ್ದೇಶಕ ಡಾ.ಗಂಗಾಧರ ತಿಳಿಸಿದ್ದಾರೆ.

ಓರ್ವ ರೋಗಿ ಹಾವು ಕಡಿತದಿಂದ ದಾಖಲಾಗಿದ್ದರು. ಅವರು ಆಂತರಿಕ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾರೆ. ಮತ್ತೊಬ್ಬ ರೋಗಿ ಕಿಡ್ನಿ ವೈಫಲ್ಯದಿಂದ ಸಾವನ್ನಪ್ಪಿದ್ದಾರೆ. ಇನ್ನೋರ್ವ ರೋಗಿ ಬಹು ಅಂಗಾಂಗ ವೈಫಲ್ಯದಿಂದ ಮೃತಪಟ್ಟಿದ್ದಾರೆ. ವಿದ್ಯುತ್ ಕಡಿತದಿಂದ ಯಾರ ಪ್ರಾಣವೂ ಹೋಗಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಜಗತ್ತಿನ ಅತ್ಯಂತ ಶ್ರೀಮಂತರಿರುವ ಸ್ಥಳಗಳು ಯಾವವು ಗೊತ್ತಾ?

https://pragati.taskdun.com/world/world-cities-millionaires-places-henlyandpartners-group-report/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button