
ಪ್ರಗತಿವಾಹಿನಿ ಸುದ್ದಿ : ಹಳೆಯ ವೈಷಮ್ಯ ಹಿನ್ನಲೆ ಯುವಕನೊಬ್ಬನನ್ನು ಚಾಕು ಇರಿದು ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರು ಆರೋಪಿಗಳ ಕಾಲಿಗೆ ಗುಂಡು ಹಾರಿಸಿ ಬಂಧಿಸಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಹುಬ್ಬಳ್ಳಿಯ ಲಿಂಗರಾಜು ನಗರದ ಬಾರ್ ಪಾರ್ಕಿಂಗ್ ಬಳಿ ಹಳೆಯ ದ್ವೇಷದ ಹಿನ್ನಲೆ ಆಕಾಶ್ ವಾಲ್ಮೀಕಿ (24) ಎಂಬಾತನನ್ನು ಮೂವರು ಆರೋಪಿಗಳು ಚಾಕುವಿನಿಂದ ಇರಿದು ಎಸ್ಕೆಪ್ ಆಗಿದ್ದರು. ಈ ವೇಳೆ ತೀವ್ರ ರಕ್ತಸ್ರಾವದಿಂದ ಆಕಾಶ್ ಸಾವನ್ನಪ್ಪಿದ್ದರು.
ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಅದರಂತೆ ಅರೋಪಿಗಳನ್ನು ಬಂಧಿಸಲು ಹೋದಾಗ ಪೊಲೀಸರ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದಾರೆ. ಈ ವೇಳೆ ಆರೋಪಿ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ