Kannada NewsKarnataka NewsLatest

*BREAKING: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಗುವಿನ ಸ್ಥಿತಿ ಗಂಭೀರವಾಗಿದೆ.

ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಅಂಚಟಗೇರಿಯಲ್ಲಿ ಈ ದುರಂತ ಸಂಭವಿಸಿದೆ. ಓವರ್ ಟೇಕ್ ಮಾಡಲು ಹೋಗಿ ಬೈಕ್ ಗೆ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್ ನಲ್ಲಿದ್ದ ಮಗು ಸ್ಥಿತಿ ಗಂಭೀರವಾಗಿದೆ.

Home add -Advt

ಮೃತರ ಗುರುತು ಪತ್ತೆಯಾಗಿಲ್ಲ. ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related Articles

Back to top button