*ಹುಬ್ಬಳ್ಳಿಯಲ್ಲಿ ದತ್ತಾತ್ರೇಯ ಮೂರ್ತಿ ಭಗ್ನ: ಕಿಡಿಗೇಡಿಗಳ ಬಂಧನಕ್ಕೆ ಸಚಿವ ಪ್ರಲ್ಹಾದ ಜೋಶಿ ಆಗ್ರಹ*

ಪ್ರಗತಿವಾಹಿನಿ ಸುದ್ದಿ: ಹುಬ್ಬಳ್ಳಿ ದೇಶಪಾಂಡೆ ನಗರದಲ್ಲಿ ದತ್ತಾತ್ರೇಯ ವಿಗ್ರಹ ಭಗ್ನಗೊಳಿಸಿದ ಕಿಡಿಗೇಡಿಗಳನ್ನು ಶೀಘ್ರ ಬಂಧಿಸುವಂತೆ ನಗರ ಪೊಲೀಸ್ ಕಮಿಷನರ್ ಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸೂಚಿಸಿದ್ದಾರೆ. ದೇಶಪಾಂಡೆ ನಗರದ ದತ್ತಾತ್ರೇಯ ದೇವಸ್ಥಾನದಲ್ಲಿನ ಈ ಘಟನೆ ಅಕ್ಷಮ್ಯ ಅಪರಾಧ ಎಂದು ಖಂಡಿಸಿರುವ ಸಚಿವರು, ಇತ್ತೀಚೆಗೆ ಹಲವೆಡೆ ಹಿಂದೂಗಳ ನಂಬಿಕೆಗೆ ಧಕ್ಕೆ ತರುವಂಥ ದುಷ್ಕೃತ್ಯಗಳು ಘಟಿಸುತ್ತಲೇ ಇದ್ದು, ಸರ್ಕಾರದ ಬಿಗಿ ಆಡಳಿತ ಇಲ್ಲದಿರುವುದೇ ಇದಕ್ಕೆಲ್ಲ ಕಾರಣ ಎಂದು ಆಕ್ರೋಶ ಹೊರ ಹಾಕಿದ್ದಾರೆ. ಸಮಾಜಘಾತಕರನ್ನು ತಕ್ಷಣ ಬಂಧಿಸಿ: ದತ್ತಾತ್ರೇಯ ಮೂರ್ತಿಯ … Continue reading *ಹುಬ್ಬಳ್ಳಿಯಲ್ಲಿ ದತ್ತಾತ್ರೇಯ ಮೂರ್ತಿ ಭಗ್ನ: ಕಿಡಿಗೇಡಿಗಳ ಬಂಧನಕ್ಕೆ ಸಚಿವ ಪ್ರಲ್ಹಾದ ಜೋಶಿ ಆಗ್ರಹ*