Latest

ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ತೀವ್ರ ಅಸ್ವಸ್ಥ; ಬೆಂಗಳೂರಿಗೆ ಶಿಫ್ಟ್

ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಲಾಬೂರಾಮ್ ತೀವ್ರ ಅನಾರೋಗ್ಯಕ್ಕೊಳಗಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ಏರ್ ಲಿಫ್ಟ್ ಮಾಡಲಾಗಿದೆ.

ಲಾಬೂರಾಮ್ ಅವರನ್ನು ಧಾರವಾಡದ ಎಸ್ ಡಿಎಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಿಗೆ ಹೆಚ್ಚಿನ ಚಿಕಿತ್ಸೆ ಅಗತ್ಯವಿರುವುದರಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಎಸ್ ಡಿಎಂ ವೈದ್ಯ ಡಾ.ಕಿರಣ್ ಹೆಗಡೆ ತಿಳಿಸಿದ್ದಾರೆ.

Home add -Advt

ಲಾಬೂರಾಮ್ ಅವರಿಗೆ ಗಂಟಲಿನಲ್ಲಿ ಬಾವು ಕಾಣಿಸಿಕೊಂಡಿದ್ದು, ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಹೆಚ್ಚಿನ ಚಿಕಿತ್ಸೆಯನ್ನು ಬೆಂಗಳೂರಿನ ಗೊತ್ತಿರುವ ವೈದ್ಯರಿಂದ ಕೊಡಿಸುವುದಾಗಿ ಕುಟುಂಬದವರು ಹೇಳಿರುವ ಹಿನ್ನೆಲೆಯಲ್ಲಿ ಅವರನ್ನು ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

Related Articles

Back to top button