ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಹುಬ್ಬಳ್ಳಿ-ಧಾರವಾಡ ಸ್ಮಾರ್ಟಸಿಟಿ ಯೋಜನೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ 2015-16ರಿಂದ 2022-23ರವರೆಗೆ 806 ಕೋಟಿ ರೂ.ಗಳ ಅನುದಾನ ಬಿಡುಗಡೆಯಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ ಭೈರತಿ ಬಸವರಾಜ ಅವರು ತಿಳಿಸಿದ್ದಾರೆ.
ವಿಧಾನ ಪರಿಷತ್ತಿನ ಪ್ರಶ್ನೋತ್ತರ ವೇಳೆಯಲ್ಲಿ ಇಂದು (ಡಿ.20) ಸದಸ್ಯ ಸಲಿಂ ಅಹ್ಮದ್ ಅವರ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಸಚಿವರು, ಸ್ಮಾರ್ಟ್ ಸಿಟಿ ಯೋಜನೆಗೆ ರೂ.1080 ಕೋಟಿ ರೂ. ಅನುದಾನ ನಿಗದಿಯಾಗಿದೆ. ಕೇಂದ್ರ ನಗರಾಭಿವೃದ್ಧಿ ಸಚಿವಾಲಯವು ಸ್ಮಾರ್ಟ್ ಸಿಟಿ ಯೋಜನೆಯನ್ನು ಪೂರ್ಣಗೊಳಿಸಲು 2023 ಜೂನ್‌ರವರೆಗೆ ಕಾಲಾವಧಿ ನಿಗದಿಪಡಿಸಿದೆ.
ಕಾಮಗಾರಿಗಳ ಸ್ಥಳ ಸರ್ವೇ ಕಾರ್ಯ ನಡೆಸಿ ಪರಿಕಲ್ಪನಾ ವರದಿ ತಯಾರಿಸುವಲ್ಲಿ, ಉದ್ದೇಶಿತ ವಾಹನಗಳಿಗೆ ಮಾನವ ಸಂಪನ್ಮೂಲ ನೇಮಕಾತಿ ವಿಷಯದಲ್ಲಿ ಕಾಲಾವಧಿ ಬೇಕಿರುವುದರಿಂದ ಮತ್ತು ಕೋವಿಡ್-19 ಕಾರಣಗಳಿಂದಲೂ ಅನುಷ್ಠಾನದಲ್ಲಿ ವಿಳಂಬವಾಗಿದೆ ಎಂದು ತಿಳಿಸಿದರು.
*ರಾಜ್ಯಗಳ ಪುನರ್ವಿಂಗಡಣಾ ಕಾಯ್ದೆ: ಭಾಷಾವಾರು ಪ್ರಾಂತಗಳ ರಚನೆಯೇ ಅಂತಿಮ*
https://pragati.taskdun.com/karnataka-maharashtra-border-issuevidhanasabhecm-basavaraj-bommaistates-redistricting-act-creation-of-language-wise-provinces-is-final/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ