Kannada NewsKarnataka NewsLatest
ಐಸಿಸ್ ಶಂಕಿತ ಉಗ್ರರ ಹುಬ್ಬಳ್ಳಿ- ಧಾರವಾಡ ಸಂಬಂಧ ಇನ್ನೂ ದೃಢಪಟ್ಟಿಲ್ಲ: ರೇಣುಕಾ ಸುಕುಮಾರ್
ಪ್ರಗತಿವಾಹಿನಿ ಸುದ್ದಿ, ಹುಬ್ಬಳ್ಳಿ: ದಿಲ್ಲಿಯಲ್ಲಿ ತನಿಖಾದಳದವರು ಬಂಧಿಸಿರುವ ಐಸಿಸ್ ಶಂಕಿತ ಉಗ್ರರು ಹುಬ್ಬಳ್ಳಿ- ಧಾರವಾಡದಲ್ಲಿ ತರಬೇತಿ ಪಡೆದಿದ್ದರು ಎಂಬ ಬಗ್ಗೆ ಇನ್ನೂ ಖಚಿತ ಮಾಹಿತಿ ಇಲ್ಲ ಎಂದು ಹುಬ್ಬಳ್ಳಿ- ಧಾರವಾಡ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ್ ತಿಳಿಸಿದ್ದಾರೆ.
ಮಂಗಳವಾರ ಸುದ್ದಿಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಈ ವಿಷಯಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳ ವರದಿಗಳನ್ನು ಆಧರಿಸಿ ನಾವು ದಿಲ್ಲಿ ಪೊಲೀಸರನ್ನು ಸಂಪರ್ಕಿಸಿ ಮಾಹಿತಿ ಪಡೆಯಲು ಯತ್ನಿಸುತ್ತಿದ್ದೇವೆ. ಆದರೆ ಈವರೆಗೆ ದಿಲ್ಲಿ ಪೊಲೀಸರು ಕೂಡ ಈ ವಿಷಯ ಬಹಿರಂಗಪಡಿಸಿಲ್ಲ” ಎಂದರು.
“ಭಯೋತ್ಪಾದನೆ ನಿಗ್ರಹದಲ್ಲಿ ಕರ್ನಾಟಕ ಪೊಲೀಸರು ಸಂಪೂರ್ಣ ಸಮರ್ಥರಾಗಿದ್ದು ಹುಬ್ಬಳ್ಳಿ- ಧಾರವಾಡ ನಗರದಲ್ಲಿ ಎಲ್ಮುಂಲ ರೀತಿಯ ಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗಿದೆ” ಎಂದು ಅವರು ತಿಳಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ