Latest

ನಟ ಸಂಚಾರಿ ವಿಜಯ್ ವಿಧಿವಶ ಎಂಬುದನ್ನು ಒಪ್ಪಲು ಸಾಧ್ಯವಾಗುತ್ತಿಲ್ಲ ಎಂದ ಸುದೀಪ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸ್ಯಾಂಡಲ್ ವುಡ್ ನಟ, ರಾಷ್ಟ್ರಪ್ರಶಸ್ತಿ ವಿಜೇತ ಸಂಚಾರಿ ವಿಜಯ್ ರಸ್ತೆ ಅಪಘಾತದಿಂದ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಸಂಚಾರಿ ವಿಜಯ್ ಸಾವನ್ನಪ್ಪಿರುವ ಬಗ್ಗೆ ಇನ್ನೂ ಅಧಿಕೃತವಾಗಿ ಘೋಷಿಸಿಲ್ಲ, ಅಂಗಾಂಗ ದಾನಕ್ಕೆ ಸಿದ್ಧತೆ ನಡೆಸಲಾಗುತ್ತಿದೆ. ಚಿಕಿತ್ಸೆ ಮುಂದುವರೆದಿದೆ ಎಂದು ಅಪೊಲೋ ಆಸ್ಪರೆ ವೈದ್ಯರು ತಿಳಿಸಿದ್ದಾರೆ.

ಬೈಕ್ ನಲ್ಲಿ ಚಲಿಸುತ್ತಿದ್ದಾಗ ಭೀಕರ ರಸ್ತೆ ಅಪಘಾತಕ್ಕೀಡಾಗಿ ಗಂಭೀರವಾಗಿ ಗಾಯಗೊಂಡಿದ್ದ ನಟ ಸಂಚಾರಿ ವಿಜಯ್ ಅವರನ್ನು ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಪಘಾತದ ಭೀಕರತೆಗೆ ಅವರ ಮೆದುಳಿನಲ್ಲಿ ರಕ್ತಸ್ರಾವವಾಗಿ, ಮೆದುಳು ಊದಿಕೊಂಡಿತ್ತು. ಶಸ್ತ್ರಚಿಕಿತ್ಸೆ ನಡೆಸಲಾಗಿತ್ತಾದರೂ ಇಂದು ಮುಂಜಾನೆ ಮೆದುಳು ನಿಷ್ಕ್ರಿಯಗೊಂಡಿತ್ತು. ಕ್ಷಣ ಕ್ಷಣಕ್ಕೂ ಅವರ ಆರೋಗ್ಯ ಕ್ಷೀಣಿಸುತ್ತಿದ್ದ ಬೆನ್ನಲ್ಲೇ ಸಂಚಾರಿ ವಿಜಯ್ ಬದುಕುಳಿಯುವುದು ಕಡಿಮೆ ಎಂದು ವೈದ್ಯರು ತಿಳಿಸಿದ್ದರು.

ಈ ಹಿನ್ನೆಲೆಯಲ್ಲಿ ಅವರ ಕುಟುಂಬದವರು ಸಂಚಾರಿ ವಿಜಯ್ ಅಂಗಾಂಗ ದಾನ ಮಾಡಲು ಸಿದ್ಧತೆ ನಡೆಸಿದ್ದು, ಲಿವರ್ ಹಾಗೂ 2 ಕಿಡ್ನಿಯನ್ನು ದಾನ ಮಾಡಲಾಗುತ್ತಿದೆ. ಬೇರೆಯವರಿಗೆ ಅಂಗಾಂಗ ಕಸಿ ಮಾಡಲು ಸಿದ್ಧತೆ ನಡೆಸಲಾಗಿದೆ ಎಂದು ವೈದ್ಯ ಡಾ.ಅರುಣ್ ನಾಯಕ್ ತಿಳಿಸಿದ್ದಾರೆ.

ಈ ನಡುವೆ ನಟ ಕಿಚ್ಚ ಸುದೀಪ್ ನತ ಸಂಚಾರಿ ವಿಜಯ್ ಕೊನೆಯುಸಿರೆಳೆದಿದ್ದಾರೆ ಎಂಬುದನು ಒಪ್ಪಲು ಸಾಧ್ಯವಾಗುತಿಲ್ಲ. ಲಾಕ್ ಡೌನ್ ಮೊದಲು ಅವರನ್ನು ಭೇಟಿಯಾಗಿದ್ದೆ. ಅವರ ಮುಂಬರು ಚಿತ್ರಕ್ಕಾಗಿ ಎಲ್ಲರೂ ಕಾಯುತ್ತಿದ್ದರು. ಅವರ ಕುಟುಂಬ ಹಾಗೂ ಸ್ನೇಹಿತರಿಗೆ ನನ್ನ ಸಂತಾಪಗಳು ಎಂದು ತಿಳಿಸಿದ್ದಾರೆ.
ಕೊರೊನಾದಿಂದ ಬಲಿಯಾದ ಕುಟುಂಬಕ್ಕೆ 1 ಲಕ್ಷ ಪರಿಹಾರ

Home add -Advt

Related Articles

Back to top button