
ಪ್ರಗತಿವಾಹಿನಿ ಸುದ್ದಿ: ಭೀಕರ ಅಪಘಾತದಲ್ಲಿ ಅಣ್ಣ ತಂಗಿ ಅಣ್ಣ ಹಾಗೂ ತಂಗಿ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘೋರ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಆಸ್ಪತ್ರೆಯಲ್ಲಿ ಕೆಲಸ ಮುಗಿಸಿದ್ದ ತಂಗಿಯನ್ನು ಮನೆಗೆ ಕರೆದುಕೊಂಡು ಹೋಗುತ್ತಿದ್ದಾಗ ಎದುರಿನಿಂದ ಬಂದ ವಾಹನ ಡಿಕ್ಕಿ ಹೊಡೆದ ಪರಿಣಾಮ ಅಣ್ಣ-ತಂಗಿ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹುಬ್ಬಳ್ಳಿಯ ಶಕುಂತಲಾ ಆಸ್ಪತ್ರೆಯಲ್ಲಿ ಯುವತಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.
ಮೃತರ ಗುರುತು ಪತ್ತೆಯಾಗಿಲ್ಲ. ಘಟನಾ ಸ್ಥಳಕ್ಕೆ ಹುಬ್ಬಳ್ಳಿ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.




