
ಹುಬ್ಬಳ್ಳಿ ಶಹರ ಠಾಣೆ ಮುತ್ತಿಗೆಗೆ ಯತ್ನ

ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ಕರಸೇವಕರ ಬಂಧನ ಖಂಡಿಸಿ ಬಿಜೆಪಿ ನಾಯಕರು ನಡೆಸುತ್ತಿದ್ದ ಪ್ರತಿಭಟನೆ ಹುಬ್ಬಳ್ಳಿಯಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿದೆ.
ಹುಬ್ಬಳ್ಳಿಯ ಶಹರ ಠಾಣೆ ಮುಂದೆ ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜೈ ಶ್ರೀರಾಮ್ ಎಂದು ಘೋಷಣೆ ಕೂಗುತ್ತಾ ಶಹರ ಪೊಲೀಸ್ ಠಾಣೆ ಮುತ್ತಿಗೆ ಹಾಕಲು ಬಿಜೆಪಿ ಕಾರ್ಯಕರ್ತರು ಮುಂದಾಗಿದ್ದಾರೆ. ಈ ವೇಳೆ ಪೊಲೀಸರು ಬ್ಯಾರಿಕೇಡ್ ಗಳನ್ನು ಹಾಕಿ ತಡೆದಿದ್ದಾರೆ. ಈ ವೇಳೆ ಪೊಲೀಸರು ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದೆ. ಪೊಲೀಸರು ಪ್ರತಿಭಟನೆ ಕೈ ಬಿಡುವಂತೆ ಬಿಜೆಪಿ ನಾಯಕರ ಮನವೊಲಿಕೆಗೆ ಯತ್ನಿಸಿದರೂ ಸಾಧ್ಯವಾಗಿಲ್ಲ.
ಆರ್.ಅಶೋಕ್ ನೇತೃತ್ವದಲ್ಲಿ ಪೊಲೀಸ್ ಠಾಣೆಯತ್ತ ಬಿಜೆಪಿ ಕಾರ್ಯಕರ್ತರು ಮುನ್ನುಗ್ಗಲು ಯತ್ನಿಸಿದ್ದಾರೆ. ಈ ವೇಳೆ ಆರ್.ಅಶೋಕ್, ಶಾಸಕರಾದ ಅರವಿಂದ್ ಬೆಲ್ಲದ್, ಮಹೇಶ್ ಟೆಂಗಿನಕಾಯಿ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ