
ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ; ಹುಬ್ಬಳ್ಳಿ-ಧಾರವಾಡ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು ಉದ್ಯಮಿಯೋರ್ವರ ಮನೆಯಲ್ಲಿ ಬರೋಬ್ಬರಿ 3 ಕೋಟಿ ರೂಪಾಯಿ ಹಣ ಜಪ್ತಿ ಮಾಡಿದ್ದಾರೆ.
ಕೇಶ್ವಾರದ ರಮೇಶ್ ಬೊಣಗೇರಿ ಎಂಬ ಉದ್ಯಮಿಯ ಮನೆ ಮೇಲೆ ದಾಳಿ ನಡೆಸಿದ ಪೊಲೀಸರಿಗೆ 3 ಕೋಟಿ ರೂಪಾಯಿ ಹಣ ಪತ್ತೆಯಾಗಿದೆ. ಆಸ್ತಿ-ಪಾಸ್ತಿಗೆ ಸಂಬಂಧಿಸಿದ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ.
ರಮೇಶ್ ಬೊಣಗೇರಿಯನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಆದರೆ 3 ಕೋಟಿ ಹಣದ ಬಗ್ಗೆ ಯಾವುದೇ ಮಾಹಿತಿ ನೀಡುತ್ತಿಲ್ಲ ಎನ್ನಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ