*ಹುಬ್ಬಳ್ಳಿಯ ಖ್ಯಾತ ಉದ್ಯಮಿ ಗಡಿಪಾರು*

ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ಹುಬಳ್ಳಿಯ ಪ್ರತಿಷ್ಠಿತ ಉದ್ಯಮಿಯೊಬ್ಬರನ್ನು ಗಡಿಪಾರು ಮಾಡಿ ಧಾರವಾಡ ಜಿಲ್ಲಾ ಪೊಲೀಸ್ ಮತ್ತು ಕಂದಾಯ ಇಲಾಖೆ ಕ್ರಮಕೈಗೊಂಡಿದೆ.

ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಉದ್ಯಮಿ ಮಂಜುನಾಥ್ ವಿರೂಪಾಕ್ಷಪ್ಪ ಹರ್ಲಾಪುರ ಎಂಬುವವರನ್ನು ಧಾರವಾಡದಿಂದ ಬೀದರ್ ಗೆ ಗಡಿಪಾರು ಮಾಡಲಾಗಿದೆ.

ಹುಬ್ಬಳ್ಳಿಯ ಬಿಡನಾಳ ನಿವಾಸಿಯಾಗಿರುವ ಮಂಜುನಾಥ್ ಹರ್ಲಾಪುರ, ಹಲವಾರು ವರ್ಷಗಳಿಂದ ಬಾಲಾಜಿ ಟ್ರೇಡಿಂಗ್ ಹೆಸರಿನಲ್ಲಿ ಬಡವರಿಗೆ ನೀಡುವ ಅಕ್ಕಿಯನ್ನು ಬೇರೆ ರಾಜ್ಯಕ್ಕೆ ಕಳ್ಳಸಾಗಣೆ ಮಾಡುತ್ತಿದ್ದರು. ಇದರ ವಿರುದ್ಧ ಧ್ವನಿ ಎತ್ತುವ ಸಾಕ್ಷಿಗಳನ್ನೇ ನಾಶಮಾಡುತ್ತಿದ್ದರು. ಈ ಹಿನ್ನೆಲೆಯಲ್ಲಿ ಆರೋಪಿಯನ್ನು ಧಾರವಾಡ ಎಸ್ ಪಿ ಲೋಕೇಶ್ ಅವರು ಗಡಿಪಾರು ಮಾಡಿ ಆದೇಶ ಹೊರಡಿಸಿದ್ದಾರೆ.

Home add -Advt

Related Articles

Back to top button